ಪೊಲೀಸರಿಗೂ ಕೊರೊನಾ ವೈರಸ್ ತಪಾಸಣೆ ನಡೆಸಲು ಪ್ರತ್ಯೇಕ ವ್ಯವಸ್ಥೆ

ನವದೆಹಲಿ, ಏಪ್ರಿಲ್.23: ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುವುದಕ್ಕಾಗಿ ವೈದ್ಯರು ಹಗಲು-ಇರುಳು ಶ್ರಮಿಸುತ್ತಿದ್ದರೆ ಕೊವಿಡ್-19 ಮಹಾಮಾರಿಯು ಸಮುದಾಯದ ಮಟ್ಟಕ್ಕೆ ಹರಡದಂತೆ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಭಾರತ ಲಾಕ್ ಡೌನ್ ನಡುವೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಶ್ರಮಿಸುತ್ತಿರುವ ಪೊಲೀಸರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯವನ್ನು ಆಡಳಿತ ಅಧಿಕಾರಿಗಳು ನಿರ್ವಹಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೂಚನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸುವುದಕ್ಕಾಗಿಯೇ ಒಂದು ಪ್ರತ್ಯೇಕ ಕೇಂದ್ರವನ್ನು ತೆರೆಯುವಂತೆ ಸರ್ಕಾರಕ್ಕೆ ಲೆಫ್ಟಿನೆಂಟ್ ಗವರ್ನ್ ಸಲಹೆ ನೀಡಿದ್ದಾರೆ.

Exclusive Testing Centre For Delhi Police Personnel, LG Anil Baijal Direct Officials

ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ಕೊರೊನಾ ಕಂಡೀಷನ್?

ಕೊರೊನಾ ವೈರಸ್ ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ನವದೆಹಲಿ ಮೂರನೇ ಸ್ಥಾನದಲ್ಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಇದುವರೆಗೂ ಕೊರೊನಾ ವೈರಸ್ ನಿಂದ 48 ಮಂದಿ ಪ್ರಾಣ ಬಿಟ್ಟಿದ್ದಾರೆ. 2,248ಕ್ಕೂ ಅಧಿಕ ಜನರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. 724 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದರ ಮಧ್ಯೆ ನವದೆಹಲಿಯ 89 ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+