ಜ್ವರದ ನಡುವೆಯೂ ಧ್ವಜಾರೋಹಣ ನೆರವೇರಿಸಿದ ಅಡ್ವಾಣಿ
ನವದೆಹಲಿ, ಆಗಸ್ಟ್ 15: ತೀವ್ರ ಜ್ವರದಿಂದ ಬಳಲುತ್ತಿದ್ದರೂ ಸ್ವಾತಂತ್ರ್ಯ ದಿನದಂದು ತಮ್ಮ ಮನೆಯಲ್ಲಿ ಧ್ವಜಾರೋಹಣ ಮಾಡುವ ಸಂಪ್ರದಾಯವನ್ನು ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರು ಮರೆಯಲಿಲ್ಲ. ವೈರಲ್ ಜ್ವರದಿಂದ ಬಳಲುತ್ತಿರುವ ಅವರು, ಗುರುವಾರ ಮನೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಆದರೆ, ಹಲವು ದಶಕಗಳಿಂದ ಪ್ರತಿ ಬಾರಿ ತಪ್ಪದೇ ಕೆಂಪುಕೋಟೆಗೆ ಹೋಗಿ ಧ್ವಜಾರೋಹಣದ ವೇಳೆ ಪಾಲ್ಗೊಳ್ಳುತ್ತಿದ್ದ ಅವರು, ಈ ಬಾರಿ ಅಲ್ಲಿಗೆ ತೆರಳಲು ಸಾಧ್ಯವಾಗಲಿಲ್ಲ. ಇದೇ ಮೊದಲ ಬಾರಿಗೆ ಅವರು ಕೆಂಪುಕೋಟೆಯ ಸ್ವಾತಂತ್ರ್ಯ ಸಂಭ್ರಮಕ್ಕೆ ಗೈರು ಹಾಜರಾದರು.

91 ವರ್ಷದ ಅಡ್ವಾಣಿ ಅವರು ಜ್ವರದಿಂದ ಬಳಲುತ್ತಿರುವ ಕಾರಣ ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸುವುದಿಲ್ಲ ಎಂದು ಬುಧವಾರ ಅವರ ಕಚೇರಿ ತಿಳಿಸಿತ್ತು. ಆದರೆ, ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದ್ದರಿಂದ ಅವರು ಹಲವು ವರ್ಷಗಳಿಂದ ಪಾಲಿಸಿಕೊಂಡುಬಂದಿರುವ ತಮ್ಮ ಸಂಪ್ರದಾಯವನ್ನು ನೆರವೇರಿಸಿದರು.
'ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹೀಗಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲು ನಿರ್ಧರಿಸಿದೆವು' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications