Get Updates
Get notified of breaking news, exclusive insights, and must-see stories!

ನಾಳೆ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ಕುರಿತು ಚರ್ಚೆ?

ನವದೆಹಲಿ, ಮೇ 24: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ಹೊಣೆ ಹೊತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಶನಿವಾರ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ ತಮ್ಮ ರಾಜೀನಾಮೆಯ ಪ್ರಕಟಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Lok Sabha Election Results rahul gandhi resignation will be decided in cwc meeting

ಕಾಂಗ್ರೆಸ್‌ನ ಅಘಾತಕಾರಿ ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ರಾಜೀನಾಮೆ ನೀಡಲು ಗುರುವಾರವೇ ಉದ್ದೇಶಿಸಿದ್ದರು. ಆದರೆ, ಅದಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನಿರಾಕರಿಸಿದ್ದರು ಎಂದು ವರದಿಯಾಗಿತ್ತು.

ರಾಹುಲ್ ಗಾಂಧಿ ಅವರ ರಾಜೀನಾಮೆ ಸುದ್ದಿ ಸುಳ್ಳು ಎಂದು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ವರದಿಗಳನ್ನು ತಳ್ಳಿಹಾಕಿದ್ದರು. ರಾಹುಲ್ ಗಾಂಧಿ ಅವರು, 'ಇದು ಪಕ್ಷ ಮತ್ತು ನನ್ನ ನಡುವಿನ ವಿಚಾರ. ನನ್ನ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡುವಿನದ್ದು' ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ರಾಜೀನಾಮೆ ಪ್ರಸ್ತಾಪ ಮಾಡಿದ್ದಾಗ ಈ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸುವಂತೆ ಸೋನಿಯಾ ಗಾಂಧಿ ಸೂಚಿಸಿದ್ದರು ಎನ್ನಲಾಗಿದೆ. ಹೀಗಾಗಿ ರಾಹುಲ್ ಗಾಂಧಿ ಶನಿವಾರ ನಡೆಯಲಿರುವ ಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಸಮಿತಿ ಸದಸ್ಯರ ಅಭಿಪ್ರಾಯಕ್ಕೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+