• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಸಭೆ ಚುನಾವಣೆ: ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ

|

ನವದೆಹಲಿ, ಮಾರ್ಚ್ 16: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಿದೆ.ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ ಬಿಜೆಪಿಯ ಹಿರಿಯ ನಾಯಕರು ಪಟ್ಟಿಯ್ನು ಬಿಡುಗಡೆ ಮಾಡಲಿದ್ದಾರೆ.

ಅಪರಾಹ್ನ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯ ನಂತರ ಪಟ್ಟ ಬಿಡುಗಡೆಯಾಗಲಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

7 ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು

Lok Sabha elections 2019: BJP to release its first list of candidates today

ಸಭೆಯಲ್ಲಿ ಪಕ್ಷಾಧ್ಯಕ್ಷ ಅಮಿತ್ ಶಾ, ಜೊತೆಗೆ ಬಿಜೆಪಿ ಹಿರಿಯ ಮುಖಂಡರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್ ಮುಂತಾದವರು ಭಾಗಿಯಾಗಲಿದ್ದಾರೆ.

ಬೆಂಗಳೂರು ದಕ್ಷಿಣ ಯಾರಿಗೂ ಬೇಡ: ತಲೆಮೇಲೆ 'ಕೈ'ಹೊತ್ತು ಕೂತ ಕಾಂಗ್ರೆಸ್?

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಬಿಜೆಪಿ ಟಿಕೆಟ್ ಗಾಗಿ ಲಾಭಿ ಆರಂಭಿಸಿದ ಸತ್ಯಜಿತ್ ಸುರತ್ಕಲ್

ಇದಕ್ಕೂ ಮುನ್ನ ಮಾರ್ಚ್ 08 ರಂದು ಸಭೆ ಸೇರಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂಬ ನಿರ್ಧಾರಕ್ಕೆ ಬಂದಿದ್ದವು. 2014 ರ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿದ್ದ ನರೇಂದ್ರ ಮೋದಿ 5,81,022 ಮತಗಳನ್ನು ಪಡೆದು ಅಮೋಘ ಗೆಲುವು ಸಾಧಿಸಿದ್ದರು.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Lok Sabha elections 2019: BJP to release its first list of candidates today. It will be including 100 candidates.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more