ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್-ಎಎಪಿ ಮೈತ್ರಿಯಿಲ್ಲ

|
Google Oneindia Kannada News

ನವದೆಹಲಿ, ಮಾರ್ಚ್ 05: ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ದೆಹಲಿ ಘಟಕದ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದಿಕ್ಷಿತ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ: ಲೋಕಸಭೆಗೆ 6 ಅಭ್ಯರ್ಥಿಗಳನ್ನು ಘೋಷಿಸಿದ AAPದೆಹಲಿ: ಲೋಕಸಭೆಗೆ 6 ಅಭ್ಯರ್ಥಿಗಳನ್ನು ಘೋಷಿಸಿದ AAP

ರಾಜಧಾನಿಯ ಏಳು ಲೋಕಸಭಾ ಕ್ಷೇತರಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಎಎಪಿಯೂ ಉತ್ಸುಕತೆ ತೋರಿತ್ತು. ಆದರೆ ಉಭಯ ನಾಯಕರಲ್ಲಿ ಒಮ್ಮತದ ಅಭಿಪ್ರಾಯ ಬರದ ಕಾರಣ ಎಎಪಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದೆ.

ದೆಹಲಿಯಲ್ಲಿ ಮತ್ತೆ ಚಿಗುರಿದ ಕನಸು! 'ಪೊರಕೆ' ಹಿಡಿಯೋಕೆ 'ಕೈ' ರೆಡಿ?ದೆಹಲಿಯಲ್ಲಿ ಮತ್ತೆ ಚಿಗುರಿದ ಕನಸು! 'ಪೊರಕೆ' ಹಿಡಿಯೋಕೆ 'ಕೈ' ರೆಡಿ?

ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವವದಲ್ಲಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ದೆಹಲಿ ಕಾಂಗ್ರೆಸ್ ಘಟಕಕ್ಕೂ ಎಎಪಿ ಜೊತೆ ಮೈತ್ರಿ ಇಷ್ಟವರಿಲಿಲ್ಲ. ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸಿದ ರಾಹುಲ್ ಗಾಂಧಿ, ವರಿಷ್ಠರ ಮಾತಿಗೆ ಬೆಲೆ ಕೊಟ್ಟು, ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

Lok Sabha elections: No alliance between Congress and AAP in Delhi

ಮೈತ್ರಿ ಮಾಡಿಕೊಳ್ಳುವುದಾದರೆ ಕಾಂಗ್ರೆಸ್ಸಿಗೆ ಕೇವಲ ಎರಡು ಸೀಟು ಬಿಟ್ಟುಕೊಡಲು ಎಎಪಿ ನಿರ್ಧರಿಸಿತ್ತು. ಆದರೆ ಈಗಾಗಲೇ ಎಎಪಿ ಆರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ನೇಮಿಸಿದೆ. ದೆಹಲಿಯಲ್ಲಿ ಒಟ್ಟು ಏಳು ಲೋಕಸಭಾ ಕ್ಷೇತ್ರಗಳಿದ್ದು, 2014 ರ ಲೋಕಸಭಾ ಚುನಾವಣೆಯಲ್ಲಿ ಏಳೂ ಕ್ಷೇತ್ರಗಳನ್ನೂ ಬಿಜೆಪಿ ಗೆದ್ದುಕೊಂಡಿತ್ತು.

English summary
Lok Sabha elections 2019: Delhi Congress Chief Sheila Dikshit says, A unanimous decision has been taken that there will be no alliance in Delhi between Congress and AAP,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X