ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಕೋವಿಡ್ ಸೋಂಕು
ನವದೆಹಲಿ, ಮಾರ್ಚ್ 21: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಏಮ್ಸ್ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ಅವರನ್ನು ದಾಖಲು ಮಾಡಲಾಗಿದೆ.
ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆ ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಸ್ಪೀಕರ್ ಓಂ ಬಿರ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಏಮ್ಸ್ ಆಸ್ಪತ್ರೆ ಹೇಳಿದೆ.
ಮಾರ್ಚ್ 19ರಂದು ಓಂ ಬಿರ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಮಾರ್ಚ್ 20ರ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಏಮ್ಸ್ ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಲೋಕಸಭೆಯ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರವೂ ಸಹ ಕಲಾಪವನ್ನು ನಡೆಸಿಕೊಟ್ಟಿದ್ದರು. ಕೋವಿಡ್ ಪರೀಕ್ಷೆ ಮಾಡಿದಾಗ ಅವರ ವರದಿ ಪಾಸಿಟಿವ್ ಬಂದಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ನವದೆಹಲಿಯಲ್ಲಿ 813 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.












Click it and Unblock the Notifications