ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಕೋವಿಡ್ ಸೋಂಕು

|
Google Oneindia Kannada News

ನವದೆಹಲಿ, ಮಾರ್ಚ್ 21: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಏಮ್ಸ್ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ಅವರನ್ನು ದಾಖಲು ಮಾಡಲಾಗಿದೆ.

ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆ ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಸ್ಪೀಕರ್ ಓಂ ಬಿರ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಏಮ್ಸ್ ಆಸ್ಪತ್ರೆ ಹೇಳಿದೆ.

ಕೇರಳದಿಂದ ಬಂದವರ ಬಳಿ ನಕಲಿ ಕೋವಿಡ್ ಸರ್ಟಿಫಿಕೇಟ್ ಪತ್ತೆ! ಕೇರಳದಿಂದ ಬಂದವರ ಬಳಿ ನಕಲಿ ಕೋವಿಡ್ ಸರ್ಟಿಫಿಕೇಟ್ ಪತ್ತೆ!

ಮಾರ್ಚ್ 19ರಂದು ಓಂ ಬಿರ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಮಾರ್ಚ್ 20ರ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಏಮ್ಸ್ ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಭಾರತದಲ್ಲಿ 24 ಗಂಟೆಯಲ್ಲಿ 43,846 ಹೊಸ ಕೋವಿಡ್ ಪ್ರಕರಣ ದಾಖಲು ಭಾರತದಲ್ಲಿ 24 ಗಂಟೆಯಲ್ಲಿ 43,846 ಹೊಸ ಕೋವಿಡ್ ಪ್ರಕರಣ ದಾಖಲು

Lok Sabha Speaker Om Birla Tests Positive For COVID 19

ಲೋಕಸಭೆಯ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರವೂ ಸಹ ಕಲಾಪವನ್ನು ನಡೆಸಿಕೊಟ್ಟಿದ್ದರು. ಕೋವಿಡ್ ಪರೀಕ್ಷೆ ಮಾಡಿದಾಗ ಅವರ ವರದಿ ಪಾಸಿಟಿವ್ ಬಂದಿದೆ.

ಕೋವಿಡ್ 19: ಮಾರ್ಚ್ 20ರಂದು ಯಾವ ದೇಶದಲ್ಲಿ ಹೆಚ್ಚು ಗುಣಮುಖ? ಕೋವಿಡ್ 19: ಮಾರ್ಚ್ 20ರಂದು ಯಾವ ದೇಶದಲ್ಲಿ ಹೆಚ್ಚು ಗುಣಮುಖ?

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ನವದೆಹಲಿಯಲ್ಲಿ 813 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

English summary
Lok Sabha speaker Om Birla tested positive For COVID-19. He admitted to AIIMS, Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X