ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

|
Google Oneindia Kannada News

Recommended Video

Lok Sabha Elections 2019 : ಕಾಂಗ್ರೆಸ್‍ಗೆ ಠಕ್ಕರ್ ಕೊಡಲಿರುವ ಬಿಜೆಪಿ

ನವದೆಹಲಿ, ಏಪ್ರಿಲ್ 08: ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಣಾಳಿಕೆ ಬಿಡುಗಡೆಯಾಗಲಿದೆ.

ಕಾಂಗ್ರೆಸ್ ಪ್ರಣಾಳಿಕೆ : ಕಾಮ್, ದಾಮ್, ಶಾನ್, ಸುಶಾಸನ್, ಸ್ವಾಭಿಮಾನ್ ಮತ್ತು ಸಮ್ಮಾನ್!ಕಾಂಗ್ರೆಸ್ ಪ್ರಣಾಳಿಕೆ : ಕಾಮ್, ದಾಮ್, ಶಾನ್, ಸುಶಾಸನ್, ಸ್ವಾಭಿಮಾನ್ ಮತ್ತು ಸಮ್ಮಾನ್!

LS polls: BJP to release its election manifesto today

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ.

ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದ ಪ್ರಣಾಳಿಕೆ ಸಮಿತಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಚಾರ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ : ಯಾರಿಗೆ ಮೊದಲ ಆದ್ಯತೆ?ಕಾಂಗ್ರೆಸ್ ಪ್ರಣಾಳಿಕೆ : ಯಾರಿಗೆ ಮೊದಲ ಆದ್ಯತೆ?

ಇವರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾನೂನು ಸಚಿವ ರವಿ ಶಂಕರ್ ಪ್ರಸಾದ್, ರೈಲ್ವೇ ಸಚಿವ ಪಿಯೂಶ್ ಗೋಯಲ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಪಕ್ಷದ ಇತರ ಮುಖಂಡರು ಪ್ರಣಾಳಿಕೆ ಸಮಿತಿಯಲ್ಲಿದ್ದಾರೆ.

ಏಪ್ರಿಲ್ 2 ರಂದು ಕಾಂಗ್ರೆಸ್ ಸಹ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ನಿರುದ್ಯೋಗ ನಿರ್ಮೂಲನೆ, ಮಹಿಳಾ ಸಬಲೀಕರಣ, ರೈತರ ಉದ್ಧಾರ ಇವೇ ಕಾಂಗ್ರೆಸ್ ಅವರ ಆದ್ಯತೆಯಾಗಿತ್ತು.

English summary
The Bharatiya Janata Party (BJP) will release its manifesto for the Lok Sabha elections 2019 on Monday. development and national security will be the key issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X