• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಪ್ರಣಬ್ ಪುತ್ರನೂ ಅಭ್ಯರ್ಥಿ

|

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಸೋಮವಾರ ರಾತ್ರಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಆಂಧ್ರಪ್ರದೇಶದ 22 ಮತ್ತು ಪಶ್ಚಿಮ ಬಂಗಾಳದ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಗಿದೆ.

ಜೊತೆಗೆ ತೆಲಂಗಾಣದಲ್ಲಿ ಎಂಟು, ಒಡಿಶಾದ ಆರು, ಅಸ್ಸಾಮ್ ನಿಂದ್ ಐವರು ಅಭ್ಯರ್ಥಿಗಳು ಮತ್ತು ಉತ್ತರ ಪ್ರದೇಶದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಗಿದೆ.

ಟಿಡಿಪಿ ಪಟ್ಟಿ ಬಿಡುಗಡೆ, ನಂ.1 ಶ್ರೀಮಂತ ಸಂಸದ ಮತ್ತೊಮ್ಮೆ ಅಭ್ಯರ್ಥಿ

ಪಶ್ಚಿಮ ಬಂಗಾಳಲದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಾಂಗ್ರೆಸ್ ಎಡಪಕ್ಷಗಳೊಂದಿಗೆ ಸಭೆ ನಡೆಸಿದ್ದೂ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಜಾಂಗಿಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ಕಣಕ್ಕಿಳಿಯುತ್ತಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ನ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಲ್ಲಿ 137 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress has released its 5th list of candidates for Lo Sabha elections on Monday. Former President Pranab Mukhergee's son Abhijit Mukherjee is also contesting from Jangipur constituency in West Bengal.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more