ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಚಾರದ ಕಣಕ್ಕಿಳಿಯಲಿರುವ ಮಮತಾ
ನವದೆಹಲಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರವಾದ ವಾರಣಾಸಿಯಲ್ಲಿ ಈ ಬಾರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಪ್ರಚಾರ ಕಣಕ್ಕಿಳಿಯಲಿದ್ದಾರೆ.
ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ ಆದ್ಯ ಕರ್ತವ್ಯ ಎಂದಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ದೀದಿ, ನನ್ನನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ನಾಯಕಿ ಮಮತಾ ಬ್ಯಾನರ್ಜಿ ಕರೆದರೆ ವಾರಣಾಸಿಗೂ ಹೋಗಿ ಪ್ರಚಾರ ಮಾಡಲು ನಾನು ಸಿದ್ಧಳಿದ್ದೇನೆ. ಅವರಿಗೆ ನನ್ನ ನೈತಿಕ ಬೆಂಬಲ ಎಂದಿಗೂ ಇದ್ದೇ ಇದೆ ಎಂದು ಅವರು ಹೇಳಿದ್ದಾರೆ.
ಜನವರಿ 19 ರಂದು ಕೋಲ್ಕತ್ತಾದಲ್ಲಿ ಬೃಹತ್ ಸಮ್ಮೇಳನ ನಡೆಸಿ ವಿಪಕ್ಷಗಳನ್ನೆಲ್ಲ ಒಂದೆಡೆ ಸೇರಿಸಿದ್ದ ಮಮತಾ ಬ್ಯಾನರ್ಜಿ ಮಹಾಘಟಬಂಧನದ ಪ್ರಧಾನಿ ಅಭ್ಯರ್ಥಿ ಎಂದು ಕರೆಸಿಕೊಳ್ಳುತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಕ್ಷೆತ್ರಗಳಿದ್ದು, ಆ ಎಲ್ಲಾ ಕ್ಷೇತ್ರಗಳಲ್ಲೂ ಟಿಎಂಸಿಯೇ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ಮತಾ ಬ್ಯಾನರ್ಜಿ ವ್ಯಕ್ತಪಡಿಸಿದ್ದಾರೆ.












Click it and Unblock the Notifications