ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮತ್ತೆ ಚಿಗುರಿದ ಕನಸು! 'ಪೊರಕೆ' ಹಿಡಿಯೋಕೆ 'ಕೈ' ರೆಡಿ?

|
Google Oneindia Kannada News

ನವದೆಹಲಿ, ಮಾರ್ಚ್ 05: ದೆಹಲಿಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯ ಬಾಗಿಲು ಮುಚ್ಚಿದೆ ಎಂದು ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಆದರೆ ಇದೀಗ ಮತ್ತೊಮ್ಮೆ ದೆಹಲಿಯಲ್ಲಿ ಮೈತ್ರಿಯ ಕನಸು ಚಿಗುರುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಪಕ್ಷದ ದೆಹಲಿ ಘಟಕದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ದೆಹಲಿ: ಲೋಕಸಭೆಗೆ 6 ಅಭ್ಯರ್ಥಿಗಳನ್ನು ಘೋಷಿಸಿದ AAPದೆಹಲಿ: ಲೋಕಸಭೆಗೆ 6 ಅಭ್ಯರ್ಥಿಗಳನ್ನು ಘೋಷಿಸಿದ AAP

ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಇಂದು ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.

LS Polls: Rahul Gandhi to hold a meeting to discuss about Congress-AAP alliance in Delhi

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯ 7 ಲೋಕಸಭಾ ಕ್ಷೇತ್ರಗಳಲ್ಲ 6ಕ್ಕೆ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದರು.

ದೆಹಲಿಯಲ್ಲಿ AAP ಪಾಲಿಗೆ ಕಾಂಗ್ರೆಸ್ 'ಮುಚ್ಚಿದ ಬಾಗಿಲು'ದೆಹಲಿಯಲ್ಲಿ AAP ಪಾಲಿಗೆ ಕಾಂಗ್ರೆಸ್ 'ಮುಚ್ಚಿದ ಬಾಗಿಲು'

ಆದರೆ ಮೈತ್ರಿ ನಿರ್ಧಾರ ಸ್ಪಷ್ಟವಾದರೆ ದೆಹಲಿಯ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ಸಿಗೆ ಬಿಟ್ಟುಕೊಡಲು ಎಎಪಿ ನಿರ್ಧರಿಸಿದೆ. ಅಕಸ್ಮಾತ್ ಕಾಂಗ್ರೆಸ್ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟರೆ ಎಎಪಿ ಸ್ವತಂತ್ರ್ಯವಾಗಿ ಚುನಾವಣೆ ಎದುರಿಸಲಿದೆ.

English summary
Lok Sabha Elections 2019: Congress President Rahul Gandhi has called a meeting of its Delhi leaders to hold discussion on alliance in Delhi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X