ಲೋಕಸಭೆ ಸೀಟು ಹಂಚಿಕೆ: ದೆಹಲಿಯಲ್ಲಿ ದೇವೇಗೌಡ-ರಾಹುಲ್ ಗಾಂಧಿ ಭೇಟಿ
Recommended Video

ನವದೆಹಲಿ, ಮಾರ್ಚ್ 06: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬುಧವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಎಚ್ ಡಿ ದೇವೇಗೌಡ ಭೇಟಿಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸದಲ್ಲಿ ಅವರನ್ನು ಭೇಟಿಯಾಗಿದ್ದು, ಉಭಯ ನಾಯಕರೂ ಸಭೆ ನಡೆಸಲಿದ್ದಾರೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ 12 ರಲ್ಲಿ ತಾನು ಕಣಕ್ಕಿಳಿಯುವುದಾಗಿ ಈಗಾಗಲೇ ಜೆಡಿಎಸ್ ಕಾಂಗ್ರೆಸ್ ಅನ್ನು ಒತ್ತಾಯಿಸುತ್ತಿದೆ. ಆದರೆ ಕಾಂಗ್ರೆಸ್ ಅದಕ್ಕೆ ಗ್ರೀನ್ ಸಿಗ್ನಲ್ ನೀಡುವುದು ಅನುಮಾನ.

ಹಾಸನ, ಮಂಡ್ಯ, ಬೆಂಗಳೂರು ಉತ್ತರ, ಶಿವಮೊಗ್ಗ, ಮೈಸೂರು, ವಿಜಯಪುರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ, ರಾಯಚೂರು ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲು ಚಿಂತಿಸಿದೆ ಎನ್ನಲಾಗಿದೆ.
ಜೆಡಿಎಸ್ ಬೇಡಿಕೆಗೆ ಕಾಂಗ್ರೆಸ್ ಒಪ್ಪಿಗೆ ಸೂಚಿಸುತ್ತದಾ ಎಂಬುದು ಇಂದು ಸಂಜೆಯ ಹೊತ್ತಿಗೆ ತಿಳಿಯಲಿದೆ. ಇದರೊಟ್ಟಿಗೆ ಮಾರ್ಚ್ 10 ರಂದು ಕಾಂಗ್ರೆಸ್ ತನ್ನೆಲ್ಲ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಾಧದ್ಯತೆ ಇದೆ.












Click it and Unblock the Notifications