ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಗಿಬೀಳುತ್ತಿರುವ ಸಂಸದರು!
ನವದೆಹಲಿ, ಅಕ್ಟೋಬರ್ 20: ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕೆಲವು ಸಂಸದರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ.
ಕೆಲವರಿಗೆ ಟಿಕೆಟ್ ನೀಡಲು ಬಿಜೆಪಿಯೇ ನಿರ್ಧರಿಸಿದ್ದರೆ, ಮತ್ತೆ ಕೆಲವು ಸಂಸದರೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗೆಲ್ಲುವ ಅಭ್ಯರ್ಥಿಗಳನ್ನೇ ಚುನಾವಣೆಗೆ ನಿಲ್ಲಿಸಬೇಕಾದ ಒತ್ತಡದಲ್ಲಿರುವ ಬಿಜೆಪಿ ಕೆಲವು ಸಂಸದರನ್ನೇ ಚುನಾವಣೆಗೆ ನಿಲ್ಲಿಸಿದರೆ ಅಚ್ಚರಿಯೇನಿಲ್ಲ.

ಸಂಸದರಿಗೆ ಟಕೆಟ್ ನೀಡುವುದು ಬಿಜೆಪಿಗೆ ಅನಿವಾರ್ಯ
ಮಧ್ಯಪ್ರದೇಶದಲ್ಲಿ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯಿದೆ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಬಿಜೆಪಿ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಗೆಲ್ಲುವ ಅಭ್ಯರ್ಥಿಗಳನ್ನೇ ಆರಿಸುವ ಒತ್ತಡದಲ್ಲಿರುವ ಬಿಜೆಪಿಗೆ ಕೆಲವು ಸಂಸದರಿಗೆ ಟಿಕೆಟ್ ನೀಡುವುದು ಅನಿವಾರ್ಯವಾಗಲಿದೆ.

ಸಂಸದರಿಂದಲೇ ಟಿಕೆಟ್ ಗೆ ಬೇಡಿಕೆ
ಇನ್ನು ಕೆಲವು ಬಿಜೆಪಿ ಸಂಸದರೇ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಮಧ್ಯಪ್ರದೇಶದ ಸುಮಾರು 40% ಪ್ರತಿಶತದಷ್ಟು ಶಾಸಕರು ಮತ್ತು ಸಂಸದರಿಗೆ ಈ ಬಾರಿ ಚುನಾವಣೆಗೆ ಟಿಕೆಟ್ ನೀಡದಿರಲು ಬಿಜೆಪಿ ನಿರ್ಧರಿಸಿದೆ. ಗೆಲುವು ಸಾಧಿಸಲು ಸಾಧ್ಯವಿಲ್ಲದ ಅಭ್ಯರ್ಥಿಗಳಿಗೆ ಟಿಕೆಟ್ ಅನ್ನು ನೀಡಲು ಬಿಜೆಪಿ ಬಿಲ್ಕುಲ್ ಒಪ್ಪುತ್ತಿಲ್ಲ. ಆದ್ದರಿಂದ ಟಿಕೆಟ್ ಹಂಚಿಕೆಯ ಸಮಯದಲ್ಲಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ಆರಂಭವಾದರೂ ಅಚ್ಚರಿಯೇನಿಲ್ಲ.

ಸಂಸದರು ಟಿಕೆಟ್ ಬಯಸುತ್ತಿರುವುದೇಕೆ?
ವಿಧಾನಸಭೆ ಚುನಾವಣೆಗೆ ಸಂಸದರು ಟಿಕೆಟ್ ಗೆ ಬೇಡಿಕೆ ಇಡುತ್ತಿರುವುದೇಕೆ? ಸಂಸದರಾದರೆ ಕೇಂದ್ರ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಕಡಿಮೆ. ಆದರೆ ಶಾಸಕರಾದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚು. ಆ ಕಾರಣದಿಂದಲೇ ಹೆಚ್ಚು ಸಂಸದರು ಮತ್ತೆ ಶಾಸಕರಾಗಲು ಹವಣಿಸುತ್ತಿದ್ದಾರೆ.

ಮತ್ತೆ ಉಪಚುನಾವಣೆ?
ಸಂಸದರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದರೆ, ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇದರಿಂದ ಮತ್ತೆ ಉಪಚುನಾವಣೆ ನಡೆಯಬೇಕಾಗಬಹುದು! ಆದರೆ 2019 ರ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಬಹುಶಃ ಉಪಚುನಾವಣೆ ನಡೆಯುವ ಸಾಧ್ಯೆಗಳು ಕಡಿಮೆ ಇರುವುದರಿಂದ ಬಿಜೆಪಿ ಸಂಸದರನ್ನು ವಿಧಾನಸಭೆ ಚುನಾವಣೆಗೆ ನಿಲ್ಲಿಸಬಹುದು.

ಚುನಾವಣೆ ಯಾವಾಗ?
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬೇಕಿರುವ ಮ್ಯಾಜಿಕ್ ನಂಬರ್ 116. ಮೂರು ಅವಧಿಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬಂದಿದ್ದು, ಇದೀಗ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications