ಮಹದಾಯಿ ವಿವಾದ, ದೆಹಲಿಯಲ್ಲಿ ರಾಜ್ಯ ಬಿಜೆಪಿ ಸಂಸದರ ಸಭೆ

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 05 : ಮಹದಾಯಿ ನದಿ ನೀರು ಹಂಚಿಕೆ ವಿವಾದದ ಮುಂದಿನ ಹೋರಾಟದ ಬಗ್ಗೆ ಬಿಜೆಪಿ ಸಂಸದರು ಸಭೆ ನಡೆಸಿದ್ದಾರೆ. ಬಿಜೆಪಿ ಸಂಸದರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಗುರುವಾರ ಸಂಜೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನವದೆಹಲಿಯ ನಿವಾಸದಲ್ಲಿ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಯಿತು. ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.[ಮಹದಾಯಿ ವಿವಾದ, ಆಗಸ್ಟ್ 7ರಂದು ಸರ್ವಪಕ್ಷ ಸಭೆ]

bjp

ಮಹದಾಯಿ ನದಿ ನೀರಿನ ಹಂಚಿಕೆ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.[ಮಹದಾಯಿ ವಿವಾದ, ಮೋದಿಗೆ ಸಿದ್ದರಾಮಯ್ಯ ಪತ್ರ]

ನದಿ ನೀರಿನ ಹಂಚಿಕೆ ವಿವಾದದಲ್ಲಿ ಕರ್ನಾಟಕದ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ಆಗಸ್ಟ್ 7ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಸಂಸದರ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ.[ಮಾತುಕತೆ ಮೂಲಕ ಮಹದಾಯಿ ವಿವಾದಕ್ಕೆ ತೆರೆ?]

ನಾರಿಮನ್ ಜೊತೆ ಇಂದು ಸಭೆ : ಮಹದಾಯಿ ನ್ಯಾಯಾಧೀಕರಣ ಕರ್ನಾಟಕ ಸರ್ಕಾರದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದೆ. ಇಂದು ನ್ಯಾಯಾಧೀಕರಣದಲ್ಲಿ ರಾಜ್ಯದ ಪರ ವಾದ ಮಂಡನೆ ಮಾಡುವ ಕಾನೂನು ತಂಡದ ಸಾರಥ್ಯ ವಹಿಸಿರುವ ನಾರಿಮನ್ ಅವರನ್ನು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದ ತಂಡ ಭೇಟಿಯಾಗಿ ಮುಂದೆ ಕೈಗೊಳ್ಳಬೇಕಾದ ಕಾನೂನು ಹೋರಾಟ ಕುರಿತು ಚರ್ಚಿಸಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP MP's met on Thursday in Delhi to discuss the strategy to be adopted by the party in the issue of Mahadayi water dispute. Meeting held at the residence of Karnataka BJP president B.S.Yeddyurappa house.
Please Wait while comments are loading...