ಲೋಕಸಭಾ ಚುನಾವಣೆಯ ಸೀಟು ಹಂಚಿಕೆ: ಇಂದು ವಿಪಕ್ಷಗಳ ಮಹತ್ವದ ಸಭೆ
ನವದೆಹಲಿ, ಡಿಸೆಂಬರ್ 20: ಲೋಕಸಭಾ ಚುನಾವಣೆಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ 'ಮಹಾಘಟಬಂಧನ'ದ ನಾಯಕರು ಇಂದು ಚರ್ಚೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಭೆ ಆರಂಭವಾಗಲಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್, ಆರ್ ಜೆಡಿ ನಾಯಕರಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಎನ್ ಡಿಎ ಯಿಂದ ಹೊರಬಂದ ರಾಷ್ಟ್ರೀಯ ಲೋಕ ಸಮತಾ ಪಕ್ಷದ ನಾಯಕ ಉಪೇಂದ್ರ ಕುಶ್ವಾಹ ಅವರು ಸಹ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
"ಈಗಾಗಲೇ ನಾವು ಉಪೇಂದ್ರ ಕುಶ್ವಾಹ ಅವರನ್ನು ಮಹಾಮೈತ್ರಿಕೂಟಕ್ಕೆ ಆಮಂತ್ರಿಸಿದ್ದೇವೆ. ದೇಶದ ಒಳಿತಿಗಾಗಿ ನಮ್ಮೊಂದಿಗೆ ಕೈಜೋಡಿಸಲು ಮನವಿ ಮಾಡಿದ್ದೇವೆ" ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಸಭೆಯು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿದ್ದು, ಮಹಾಘಟಬಂಧನಕ್ಕೆ ಬೆಂಬಲ ನೀಡುವ ವಿವಿಧ ಪಕ್ಷಗಳು ಭಾಗವಹಿಸಲಿವೆ. ಯಾವೆಲ್ಲ ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.












Click it and Unblock the Notifications