ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ, ಅಕ್ಟೋಬರ್ 01: ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ 125 ಅಭ್ಯರ್ಥಿಗಳ ಹೆಸರಿದ್ದು, ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರ ನೈರುತ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. 2014 ರಲ್ಲೂ ಫಡ್ನವಿಸ್ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಕೊತ್ರುಡ್ ನಿಂದ ಸ್ಪರ್ಧಿಸಲಿದ್ದರೆ ಪಂಕಜ ಮುಂಡೆ ಪಾರ್ಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

Maharashtra Assembly Elections : BJP Releases First List of 125 Candidates

ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಅವರ ಸೊಸೆ ಮುಕ್ತ ತಿಲಕ್ ಅವರಿಗೂ ಬಿಜೆಪಿ ಟಿಕೆಟ್ ನೀಡಿದ್ದು, ಅವರು ಕಸ್ಬಾಪೇಟೆಯಿಂದ ಸ್ಪರ್ಧಿಸಲಿದ್ದಾರೆ.

ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 144, ಡಿವಸೇನೆ 126 ಮತ್ತು ಇತರ ಸಣ್ಣ ಪುಟ್ಟ ಮೈತ್ರಿಪಕ್ಷಗಳು 18 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಸೋಮವಾರ ಬಿಡುಗಡೆ ಮಾಡಿತ್ತು. ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, ಪಕ್ಷದ ರಾಜ್ಯಾಧ್ಯಕ್ಷ ವಿಜಯ್ ಬಾಳಾಸಾಹೇಬ್ ಥೋರಟ್ ಸೇರಿದಂತೆ 51 ಅಭ್ಯರ್ಥಿಗಳ ಈ ಪಟ್ಟಿಯಲ್ಲಿದ್ದಾರೆ.

ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+