• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ ವಿಧಾನಸಭಾ ಚುನಾವಣೆ ಗೆಲ್ಲಲು 'ದೇವೇಂದ್ರ'ನ ಮೊರೆಗೆ ಬಿಜೆಪಿ!

|

ನವದೆಹಲಿ, ಸಪ್ಟೆಂಬರ್.30: ಬಿಹಾರ ವಿಧಾನಸಭಾ ಚುನಾವಣೆ ಕಣ ರಂಗೇರಿದೆ. ಭಾರತೀಯ ಜನತಾ ಪಕ್ಷದ ಚುನಾವಣೆ ಉಸ್ತುವಾರಿಯಾಗಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ರನ್ನು ನೇಮಕಗೊಳಿಸಿ ಆದೇಶಿಸಿದೆ.

ನವದೆಹಲಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಭೂಪೇಂದರ್ ಯಾದವ್ ಸಭೆಯಲ್ಲಿ ಹಾಜರಿದ್ದರು.

4 ರಾಜ್ಯ ಬಿಟ್ಟು, ಉಳಿದೆಡೆ ಉಪ ಚುನಾವಣೆ ದಿನಾಂಕ ಘೋಷಣೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆ ಬಳಿಕ ಬಿಜೆಪಿ ಮುಖಂಡ ಭೂಪೇಂದರ್ ಯಾದವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಘಟಬಂಧನ್ ಬಿಹಾರ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ತಿಳಿಸಿದ್ದಾರೆ.

ಮೂರು ಪಕ್ಷಗಳ ಎನ್ ಡಿಎ ಘಟಬಂಧನ್:

ಭಾರತೀಯ ಜನತಾ ಪಕ್ಷ, ಜೆಡಿಯು ಮತ್ತು ಲೋಕ ಜನಶಕ್ತಿ ಪಕ್ಷವು ಒಟ್ಟಾಗಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಎದುರಿಸಲಿವೆ. ಇದರ ಜೊತೆಗೆ ಜೀತೇಂದ್ರ ಮಾಂಜಿ ಕೂಡಾ ಜೆಡಿಯು ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮುಖಂಡ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

3 ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ:

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

English summary
Maharashtra Ex-CM Devendra Fadnavis Appointed As Party's In-Charge Of Bihar Assembly Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X