ಸಿಎಂ ರಾಜೀನಾಮೆ, ಮೂರೇ ದಿನಕ್ಕೆ ಉರುಳಿದ ಮಹಾರಾಷ್ಟ್ರ ಸರ್ಕಾರ
ನವದೆಹಲಿ, ನವೆಂಬರ್ 27: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದು ನಿಂತಿದೆ. ಬುಧವಾರ ಸಂಜೆ 5ಗಂಟೆಯೊಳಗೆ ಬಿಜೆಪಿ-ಎನ್‌ಸಿಪಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಮೂಲಕ ಆತುರಾತರವಾಗಿ ರಚಿಸಲ್ಪಟ್ಟ ಸರ್ಕಾರದ ಅಳಿವು-ಉಳಿವು ತೀರ್ಮಾನವಾಗಲಿದೆ.
ಮಹಾರಾಷ್ಟ್ರ ಸರ್ಕಾರ ರಚನೆಯು ಅಸಾಂವಿಧಾನಿಕ ಎಂದು ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಶನಿವಾರ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ನವೆಂಬರ್ 27ರಂದು ಸಂಜೆ 5 ಗಂಟೆಯೊಳಗೆ ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ಆದೇಶ ನೀಡಿದೆ.
ಶನಿವಾರ ಮುಂಜಾನೆ ದಿಢೀರ್ ಆಗಿ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚನೆ ಮಾಡಲಾಗಿತ್ತು. ಬಿಜೆಪಿ ಸದನದಲ್ಲಿ 105 ಸದಸ್ಯ ಬಲ ಹೊಂದಿದೆ. 6 ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಎನ್‌ಸಿಪಿಯ ಎಷ್ಟು ಶಾಸಕರು ಬೆಂಬಲ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ.

ಮಹಾರಾಷ್ಟ್ರ ರಾಜಕಾರಣ ಮತ್ತು ಸುಪ್ರೀಂಕೋರ್ಟ್‌ನ ವಿಚಾರಣೆಯ ಕ್ಷಣ-ಕ್ಷಣದ ಮಾಹಿತಿ ಒನ್ ಇಂಡಿಯಾ ಕನ್ನಡದಲ್ಲಿ.















Click it and Unblock the Notifications