ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀಪಾವಳಿ ಮುನ್ನವೇ ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಸಾಧ್ಯತೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 20: ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಚುನಾವಣೆಗಳ ದಿನಾಂಕ ಶೀಘ್ರದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ. ಜಾರ್ಖಂಡ್ ನಲ್ಲೂ ಚುನಾವಣೆ ನಡೆಯಬೇಕಿದ್ದು, ಆ ರಾಜ್ಯದ ಚುನಾವಣೆಯನ್ನು ಉಳಿದ ಎರಡು ರಾಜ್ಯದ ಜತೆಗೆ ನಡೆಸುವುದಿಲ್ಲ ಎನ್ನಲಾಗಿದೆ. ಜಾರ್ಖಂಡ್ ಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಬಹುದು. ಅಲ್ಲಿ ವಿಧಾನಸಭೆ ಅವಧಿ ಜನವರಿ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ.

ಸೀಟು ಹಂಚಿಕೆ ವಿವಾದ, ಬಿಜೆಪಿ ಜೊತೆ ಮೈತ್ರಿಗೆ ಒಲ್ಲೆ ಎಂದ ಶಿವಸೇನೆ?ಸೀಟು ಹಂಚಿಕೆ ವಿವಾದ, ಬಿಜೆಪಿ ಜೊತೆ ಮೈತ್ರಿಗೆ ಒಲ್ಲೆ ಎಂದ ಶಿವಸೇನೆ?

ಅಕ್ಟೋಬರ್ ಇಪ್ಪತ್ತೇಳನೇ ತಾರೀಕು ದೀಪಾವಳಿ ಇದ್ದು, ಅದಕ್ಕೂ ಮುನ್ನ ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರದಂದು ಚುನಾವಣೆ ಆಯೋಗದಿಂದ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ಹರ್ಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಬಹುದು ಎಂದು ಬಿಜೆಪಿ ಸಾಮಾಜಿಕ ಮಾಧ್ಯಮದ ಉಸ್ತುವಾರಿ ಪ್ರೀತಿ ಗಾಂಧಿ ಟ್ವೀಟ್ ಮಾಡಿದ್ದಾರೆ.

Maharashtra, Haryana Elections Likely Before Diwali

ಚುನಾವಣೆ ದಿನಾಂಕ ಘೋಷಣೆ ಆದ ತಕ್ಷಣವೇ ಆಯಾ ರಾಜ್ಯಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಶಿವ ಸೇನಾ ಪ್ರಚಾರ ಆರಂಭಿಸಿಯಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಳೆದ ತಿಂಗಳಿಂದ ಮಹಾ ಜನ್ ಆದೇಶ್ ಯಾತ್ರಾ ಮಾಡುತ್ತಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ, ಹರ್ಯಾಣದಲ್ಲಿ ಅಕ್ಟೋಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು.

English summary
Assembly elections of Maharashtra and Haryana likely to held before Diwali, October 27th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X