ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿಪಕ್ಷ ನಾಯಕ

|
Google Oneindia Kannada News

ನವದೆಹಲಿ, ಜೂನ್ 2 : ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಮಾಜಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಸೋಮವಾರ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ದ್ವಿವೇದಿ, 16ನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ನಿರೀಕ್ಷಿಸುತ್ತಿದ್ದ ಇಂಡಿಯನ್ ಯೂತ್ ಕಾಂಗ್ರೆಸ್ ಗೆ ನಿರಾಸೆಯಾಗಿದೆ.

Mallikarjun Kharge

ಲೋಸಕಭೆಯಲ್ಲಿ ವಿಪಕ್ಷ ನಾಯಕರಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡಬೇಕೆಂದು ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ ) ಒತ್ತಾಯಿಸಿತ್ತು. ಆದರೆ, ಗುಲ್ಬರ್ಗ ಕ್ಷೇತ್ರದ ಸಂಸದ ಮತ್ತು ಮಾಜಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ 71 ವರ್ಷದ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಗುಲ್ಬರ್ಗ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಯುಪಿಎ ಸರ್ಕಾರದಲ್ಲಿ ಕಾರ್ಮಿಕ, ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

2ನೇ ಬಾರಿ ಗೆಲುವು : 2014ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 5,07,193 ಮತಗಳನ್ನು ಗಳಿಸುವ ಮೂಲಕ ಎರಡನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ. 74,733 ಮತಗಳ ಅಂತರದಿಂದ ಅವರು ಬಿಜೆಪಿ ಅಭ್ಯರ್ಥಿ ರೇವೂ ನಾಯಕ ಬೆಳಮಗಿ ಅವರನ್ನು ಸೋಲಿಸಿದ್ದಾರೆ.

English summary
Despite a strong demand for Rahul Gandhi to head the party in the Parliament, the Congress on Monday declared that former railways minister Mallikarjun Kharge would be the leader of Congress in Lok Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X