ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಹೆಸರು ಔಟ್!
ನವದೆಹಲಿ, ಅಕ್ಟೋಬರ್ 7: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರಾದ ಮನೇಕಾ ಗಾಂಧಿ ಮತ್ತು ಅವರ ಮಗ ವರುಣ್ ಗಾಂಧಿಯವರನ್ನು 80 ಸದಸ್ಯರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ನೂತನ ಪಟ್ಟಿಯನ್ನು ಬಿಡುಗಡೆ ಮಾಡಿದರು. ಸುಲ್ತಾನಪುರದ ಲೋಕಸಭಾ ಸಂಸದೆ ಮನೇಕಾ ಗಾಂಧಿ ಹಾಗೂ ಅವರ ಮಗ ಪಿಲಿಭಿತ್ ಲೋಕಸಭಾ ಕ್ಷೇತ್ರದ ಸಂಸದ ವರುಣ್ ಗಾಂಧಿಯನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ, ಅನೇಕ ಕೇಂದ್ರ ಸಚಿವರು, ಹಲವಾರು ಹಿರಿಯ ರಾಜ್ಯ ನಾಯಕರ ಹೆಸರುಗಳಿವೆ.

80 ಸಾಮಾನ್ಯ ಸದಸ್ಯರಲ್ಲದೆ, ಕಾರ್ಯಕಾರಿ ಸಮಿತಿಯಲ್ಲಿ 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಸ್ಥಾನ ಹೊಂದಿರುತ್ತಾರೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಪ್ರಮುಖ ವಿಚಾರ ಮಂಡನೆಯಾಗಿದ್ದು, ಅದು ಸರ್ಕಾರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಸಂಘಟನೆಯ ಕಾರ್ಯಸೂಚಿಯನ್ನು ರೂಪಿಸಲು ಚರ್ಚಿಸಲಾಯಿತು. ಕೋವಿಡ್- 19 ಸಾಂಕ್ರಾಮಿಕ ರೋಗದಿಂದ ಉಂಟಾದ ಅಡಚಣೆಯ ದೀರ್ಘಕಾಲದ ಬಳಿಕ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ಈ ಪಟ್ಟಿಯಲ್ಲಿ ನಿರೀಕ್ಷಿತರಾಗಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ಅಶ್ವಿನಿ ವೈಷ್ಣವ್‌ರನ್ನೂ ಸೇರಿಸಲಾಗಿದೆ. ಮಾಜಿ ಕೇಂದ್ರ ಸಚಿವರಾದ ಹರ್ಷವರ್ಧನ್, ರವಿಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವ್ಡೇಕರ್ ಕೂಡ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಉಳಿದಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿಯು ಬಿಜೆಪಿ ಪಕ್ಷದ ಒಟ್ಟಾರೆ ಕಾರ್ಯತಂತ್ರದ ದಿಕ್ಕನ್ನು ಮತ್ತು ಅಭಿವೃದ್ಧಿ ನೀತಿಯನ್ನು ಹೊಂದಿಸುತ್ತದೆ. ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ನೇಮಕಗೊಂಡ ಸದಸ್ಯರನ್ನು ಒಳಗೊಂಡಿರುತ್ತದೆ.
ಇದರ ಮಧ್ಯೆ, ಮುಂದಿನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ನವೆಂಬರ್ 7ರಂದು ದೆಹಲಿಯಲ್ಲಿ ನಡೆಯಲಿದ್ದು, ಪ್ರತಿ ವರ್ಷ ಸಭೆ ನಡೆಸಲಾಗುತ್ತದೆ. ಇದನ್ನು ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕಾಗಿ ಬಿಜೆಪಿಯ ಸಾಂವಿಧಾನಿಕ ಕಾರ್ಯವಿಧಾನವೆಂದು ಪರಿಗಣಿಸಲಾಗಿದೆ. ಜನವರಿ 2019ರಲ್ಲಿ ಕೊನೆಯ ಬಾರಿಗೆ ಬಿಜೆಪಿ ಪಕ್ಷವು ಪೂರ್ಣ ಪ್ರಮಾಣದ ರಾಷ್ಟ್ರೀಯ ಕಾರ್ಯಕಾರಿ ಸಮಾವೇಶವನ್ನು ಕರೆದಿತ್ತು.
ಜೆ.ಪಿ. ನಡ್ಡಾ ಕೈಬಿಟ್ಟ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರಲ್ಲಿ ಮಾಜಿ ಕೇಂದ್ರ ಸಚಿವರಾದ ಡಾ. ಮಹೇಶ್ ಶರ್ಮಾ, ವಿಜಯ್ ಗೋಯೆಲ್ ಮತ್ತು ಡಾ.ಸಿ.ಪಿ. ಠಾಕೂರ್, ಪ್ರಸ್ತುತ ಕೇಂದ್ರ ಸಚಿವರಾದ ರಾವ್ ಇಂದರ್ಜಿತ್ ಸಿಂಗ್, ಅಶ್ವನಿ ಕುಮಾರ್ ಚೌಬೆ ಮತ್ತು ಪ್ರಹ್ಲಾದ್ ಸಿಂಗ್ ಪಟೇಲ್, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೆಸರನ್ನು ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ತೆಗೆದು ಹಾಕಲಾಗಿದೆ.
ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ದಿನೇಶ್ ತ್ರಿವೇದಿ ಸೇರಿದಂತೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಕ್ಷಕ್ಕೆ ಕೆಲವು ಹೊಸಬರನ್ನು ಸೇರಿಸಿಕೊಳ್ಳಲಾಗಿದೆ.
ಪ್ರಮುಖ ಬಿಜೆಪಿ ಪ್ರಚಾರಕರು ಮತ್ತು ಬಂಗಾಳ ಚುನಾವಣೆಯಲ್ಲಿ ನಟ ಮಿಥುನ್ ಚಕ್ರವರ್ತಿ ಮತ್ತು ಸಂಸದ ಸ್ವಪನ್ ದಾಸ್ ಗುಪ್ತಾರನ್ನು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಸೇರಿಸಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಜಿ. ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್, ಹರ್ದೀಪ್ ಸಿಂಗ್ ಪುರಿ, ವಿ. ಮುರಳೀಧರನ್, ಭೂಪೇಂದರ್ ಯಾದವ್, ಅನುರಾಗ್ ಠಾಕೂರ್, ಮೀನಾಕ್ಷಿ ಲೇಖಿ ಮತ್ತು ಎಸ್. ಜೈಶಂಕರ್ ಸೇರಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications