ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಿಗೆ ಕೊರೊನಾವೈರಸ್
ನವದೆಹಲಿ, ನವೆಂಬರ್.12: ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟರ್ ನಲ್ಲಿ ಮುಖ್ಯಮಂತ್ರಿಗಳೇ ಬರೆದುಕೊಂಡಿದ್ದಾರೆ.
"ನನಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲ ಕಾರ್ಯಕರ್ತರು ಮತ್ತು ಸಂಪರ್ಕಿತರು ಮುನ್ನೆಚ್ಚರಿಕೆ ಕ್ರಮವಾಗಿ ಒಮ್ಮೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆ ಅನುಮಾನಗೊಂಡು ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ ಎಂದು ತಿಳಿದು ಬಂದಿದೆ.

ಮಣಿಪುರದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ಮಣಿಪುರದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 21636ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3084 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 18,334 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಗೆ 214 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications