ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್
ನವದಹಲಿ, ಸೆಪ್ಟೆಂಬರ್ 29: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಮ್ಯಾಕ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಿಸೋಡಿಯಾ ಡೆಂಗ್ಯೂ ಹಾಗೂ ಕೊರೊನಾಗೆ ತುತ್ತಾಗಿದ್ದರು. ಅವರನ್ನು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ವೈದ್ಯರು ಪ್ಲಾಸ್ಮಾ ಥೆರಪಿಯನ್ನು ಕೂಡ ಮಾಡಿದ್ದರು.
ಅವರ ರಕ್ತದ ಪ್ಲೇಟ್ಲೆಟ್ಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿದ್ದ ಅವರನ್ನ ಈಗ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಐಸಿಯುನಲ್ಲಿಡಲಾಗಿತ್ತು.

ಸೆಪ್ಟೆಂಬರ್ 14ರಂದು ಮನೀಶ್ ಸಿಸೋಡಿಯಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಶನ್ನಲ್ಲಿದ್ದ ಅವರು ಜ್ವರ ಹಾಗೂ ಉಸಿರಾಟದ ತೊಂದರೆ ಹೆಚ್ಚಾಗಿ ಸೆಪ್ಟೆಂಬರ್ 23ರಂದು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
High Command ಹತ್ರ ಮಾತು ಕಥೆ in Process | Oneindia Kannada












Click it and Unblock the Notifications