ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಕೊವಿಡ್ ಪರೀಕ್ಷೆ

ದೆಹಲಿ, ಮೇ 12: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅನಾರೋಗ್ಯದ ಕಾರಣ ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ, ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಆತಂಕ ಮೂಡಿಸಿತ್ತು.

ಮುನ್ನೆಚ್ಚರಿಕೆ ಕ್ರಮವಾಗಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಫಲಿತಾಂಶ ನೆಗಿಟಿವ್ ಬಂದಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇನ್ನು ಸಿಂಗ್ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಮೂಲಗಳ ಪ್ರಕಾರ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನ ಕಾರ್ಡಿಯೋ-ಥೊರಾಸಿಕ್ ಸೈನ್ಸಸ್ ಕೇಂದ್ರದಲ್ಲಿ ಮನಮೋಹನ್ ಸಿಂಗ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Manmohan Singh Covid19 Test Comes Negative

ಸೋಮವಾರಕ್ಕೆ ಹೋಲಿಸಿಕೊಂಡರೆ ಈಗ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಜ್ವರವೂ ಕಡಿಮೆಯಾಗಿದೆ ಎಂದು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.

87 ವರ್ಷದ ಸಿಂಗ್ ಅವರಿಗೆ ಹಲವು ಪ್ರಮುಖ ಪರೀಕ್ಷೆಗಳನ್ನ ಮಾಡಲಾಗಿದೆ. ಅದರಲ್ಲಿ ಕೆಲವು ಪರೀಕ್ಷೆಯ ಫಲಿತಾಂಶಗಳು ಬರಬೇಕಿದೆ. ಬಹುಶಃ ಒಂದೆರಡು ದಿನದಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+