ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ದೆಹಲಿ, ಮೇ 12: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
87 ವರ್ಷದ ಕಾಂಗ್ರೆಸ್ ಪಕ್ಷದ ಹಿರಿಯ ಮನಮೋಹನ್ ಸಿಂಗ್ ಎದೆನೋವು ಮತ್ತ ಜ್ವರ ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಸಂಜೆ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
Former Prime Minister Dr Manmohan Singh has been discharged from AIIMS, Delhi on medical advice: AIIMS official pic.twitter.com/hcJSbGDVrT
— ANI (@ANI) May 12, 2020
Recommended Video
ಇದೀಗ, ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದ ಕಾರಣ, ಅವರನ್ನು ಮನೆಗೆ ಕಳುಹಿಸಲಾಗಿದೆ. ಭಾನುವಾರದಿಂದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನ ಕಾರ್ಡಿಯೋ-ಥೊರಾಸಿಕ್ ಸೈನ್ಸಸ್ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗಿದೆ,
ಅಂದ್ಹಾಗೆ, ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ, ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ, ಸಿಂಗ್ ಅವರ ವರದಿ ನೆಗಿಟಿವ್ ಬಂದಿತ್ತು.

ಕಳೆದ ವಾರ ಕಾಂಗ್ರೆಸ್ ಆಡಳಿತ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ನಡೆಸಿದ ವೇಳೆ, ಮನಮೋಹನ್ ಸಿಂಗ್ ಕೂಡ ಭಾಗಿಯಾಗಿದ್ದರು. ಅದಾದ ಬಳಿಕ ಯಾವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.












Click it and Unblock the Notifications