ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹೇಗಿದೆ?

|
Google Oneindia Kannada News

ನವದೆಹಲಿ, ಏಪ್ರಿಲ್ 20: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

ಅವರಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಮಾಡಲಾಗುತ್ತಿದೆ, ಅವರ ಶೀಘ್ರ ಚೇತರಿಕೆಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಕೋವಿಡ್ ಪಾಸಿಟಿವ್ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಕೋವಿಡ್ ಪಾಸಿಟಿವ್

ಎರಡೂ ಕೋವಿಡ್ ಲಸಿಕೆ ಡೋಸ್ ಪಡೆದಿದ್ದ ಡಾ.ಸಿಂಗ್: ಇನ್ನು ಮನಮೋಹನ್ ಸಿಂಗ್ ಅವರು ಕೋವಿಡ್ ಸೋಂಕಿಗೆ ತುತ್ತಾಗುವ ಮುನ್ನ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ಮಾರ್ಚ್ 4 ಮೊದಲ ಡೋಸ್ ಮತ್ತು ಏಪ್ರಿಲ್ 3 ರಂದು 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು.

Manmohan Singhs Condition Stable, Best Possible Care Being Provided To Him: Harsh Vardhan

ಇದಾಗ್ಯೂ ಅವರಿಗೆ ಸೋಂಕು ತಗುಲಿದೆ. ಇನ್ನು ಮನಮೋಹನ್ ಸಿಂಗ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ವಿದೇಶಾಂಗ ಸಚಿವ ಎಸ್ ಜೈಶಂಕರ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ನಾಯಕರು ಹಾರೈಸಿದ್ದಾರೆ.

ಸೋಮವಾರ ಬೆಳಿಗ್ಗೆ ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಡಾ.ಮನಮೋಹನ್ ಸಿಂಗ್ ಅವರಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತು. ಈ ವೇಳೆ ಅವರ ವರದಿ ಪಾಸಿಟಿವ್ ಬಂದಿತ್ತು.

ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ಆಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ನುರಿತ ಮತ್ತು ಹಿರಿಯ ವೈದ್ಯರು ಮನಮೋಹನ್ ಸಿಂಗ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

English summary
Union Health Minister Dr Harsh Vardhan on Tuesday followed up on former Prime Minister Dr Manmohan Singh's health with the medical team attending to him at AIIMS Delhi and said that his condition is stable.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X