ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಏಮ್ಸ್ ನಿಂದ ಗೋವಾದತ್ತ ಮನೋಹರ್ ಪರಿಕರ್

|
Google Oneindia Kannada News

ನವದೆಹಲಿ, ಅಕ್ಟೋಬರ್ 14: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಭಾನುವಾರ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಮೇದೋಜ್ಜೀರಕ ಗ್ರಂಥಿಯ ಸಮಸ್ಯೆಯಿಂದ ಅವರು ನವದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಗೋವಾಗೆ ಹಿಂತಿರುಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಏಮ್ಸ್ ಮೂಲಗಳು ತಿಳಿಸುವಂತೆ, ಭಾನುವಾರ ಬೆಳಗ್ಗೆ ಮನೋಹರ್ ಪರಿಕರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿದ್ದರಿಂದ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೂ ನಂತರ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಮನೋಹರ್ ಪರಿಕರ್ ರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ನಿರ್ಧರಿಸಿದ್ದರು.

ಆಸ್ಪತ್ರೆಯಲ್ಲೇ ಸಂಪುಟ ಸಭೆ ಕರೆದ ಗೋವಾ ಮುಖ್ಯಮಂತ್ರಿ ಪರಿಕ್ಕರ್ಆಸ್ಪತ್ರೆಯಲ್ಲೇ ಸಂಪುಟ ಸಭೆ ಕರೆದ ಗೋವಾ ಮುಖ್ಯಮಂತ್ರಿ ಪರಿಕ್ಕರ್

62 ವರ್ಷದ ಪರಿಕ್ಕರ್ ದೆಹಲಿಯ ಏಮ್ಸ್ ನಲ್ಲಿ ಸೆಪ್ಟೆಂಬರ್ 15ರಂದು ದಾಖಲಾಗಿದ್ದರು. ವಿಶೇಷ ವಿಮಾನದಲ್ಲಿ ಭಾನುವಾರದಂದು ಗೋವಾಕ್ಕೆ ಅವರನ್ನು ಕರೆದೊಯ್ಯಲಾಗುವುದು ಎಂದು ತಿಳಿಸಲಾಗಿತ್ತು. ಆದರೆ ಈ ಬಗ್ಗೆ ವೈದ್ಯರು ಇನ್ನಷ್ಟೇ ಖಾತ್ರಿ ಪಡಿಸಬೇಕಿದೆ ಎಂದು ಗೋವಾ ಮುಖ್ಯಮಂತ್ರಿಗಳ ಕಚೇರಿಯು ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.

Manohar Parrikar discharged from AIIMS; likely to return to Goa

ಗೋವಾಕ್ಕೆ ಪರಿಕರ್ ಹಿಂತಿರುಗಿದರೆ ಪಣಜಿಯಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಉಳಿದುಕೊಳ್ಳಲಿದ್ದಾರೆ. ಶುಕ್ರವಾರದಂದು ಗೋವಾ ಬಿಜೆಪಿ ಸಮಿತಿಯ ಸದಸ್ಯರು, ಸಚಿವರು ಹಾಗೂ ಮಿತ್ರ ಪಕ್ಷಗಳ ಸದಸ್ಯರ ಜತೆಗೆ ಪರಿಕರ್ ಸಭೆ ನಡೆಸಿದ್ದರು. ಇನ್ನು ಗೋವಾ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಟ್ಟ ಗೋವಾ ಸಿಎಂ ಪರಿಕ್ಕರ್ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಟ್ಟ ಗೋವಾ ಸಿಎಂ ಪರಿಕ್ಕರ್

ಈ ವರ್ಷದ ಫೆಬ್ರವರಿ ಮಧ್ಯದಿಂದ ವಿವಿಧ ಆಸ್ಪತ್ರೆಗಳಲ್ಲಿ ಮನೋಹರ್ ಪರಿಕರ್ ಅನಾರೋಗ್ಯದ ಕಾರಣಕ್ಕೆ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ.

English summary
Goa Chief Minister Manohar Parrikar was Sunday discharged from the AIIMS, where he has been undergoing treatment for pancreatic ailment, and is likely to return to his home state, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X