ಸೋನಿಯಾ ಗಾಂಧಿಯೇ ಅಧ್ಯಕ್ಷರಾಗಲೀ, ಹಿರಿಯ ಕಾಂಗ್ರೆಸ್ಸಿಗರ ಒತ್ತಾಯ

ನವದೆಹಲಿ, ಜುಲೈ 16: ಖಾಲಿಯಿರುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತುಂಬಲು ಸಮರ್ಥ ವ್ಯಕ್ತಿ ಯಾರು ಎಂಬ ಹುಡುಕಾಟದಲ್ಲಿರುವ ಕಾಂಗ್ರೆಸ್ ನ ಹಿರಿಯ ಮುಖಂಡರಿಗೆ ಗಾಂಧಿ ಕುಟುಂಬದ ಹೊರತಾಗಿ ಬೇರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡುವುದು ಪಕ್ಷದ ವರ್ಚ್ಚಸ್ಸಿಗೇ ಒಳ್ಳೆಯದಲ್ಲ ಎನ್ನಿಸಿದೆ.

ಆದ್ದರಿಂದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೇ ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಕೆಲವು ಹಿರಿಯ ಕಾಂಗ್ರೆಸ್ಸಿಗರು ಮುಂದಿಟ್ಟಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಕೇವಲ 59 ಕ್ಷೇತ್ರಗಳಲ್ಲಷ್ಟೇ ಗೆದ್ದು, ಕಳಪೆ ಪ್ರದರ್ಶನ ತೋರಿದ ಕಾರಣಕ್ಕೆ ಈ ಸೋಲಿನ ಹೊಣೆ ಹೊತ್ತು ಪಕ್ಷಾಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಕೆಳಗಿಳಿದರು. ಅವರ ಮನವೊಲಿಸುವ ಎಲ್ಲಾ ಪ್ರಯತ್ನವೂ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಪರ್ಯಾಯವನ್ನು ಹುಡುಕಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಈ ವಾರದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷಾಧ್ಯಕ್ಷರ ಘೋಷಣೆಯಾಗಬೇಕಿದೆ. ಆದರೆ ಇದುವರೆಗೂ ಆ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿಲ್ಲ.

Many Congress leaders want Sonia Gandhi as party president

ಈ ಮೊದಲೇ ಸೋನಿಯಾ ಗಾಂಧಿ ಅವರ ಬಳಿ ಪಕ್ಷದ ಅಧ್ಯಕ್ಷರಾಗುವಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಮನವಿ ಮಾಡಿದ್ದರು. ಕನಿಷ್ಠಪಕ್ಷ ಹಂಗಾಮಿ ಅಧ್ಯಕ್ಷರಾಗಿಯಾದರೂ ಕೆಲ ದಿನ ಮುಂದುವರಿಯುವಂತೆ ವಿನಂತಿಸಿದ್ದರು. ಆದರೆ ಈ ಬೇಡಿಕೆಯನ್ನು ನಯವಾಗಿಯೇ ತಿರಸ್ಕರಿಸಿದ್ದ ಸೋನಿಯಾ ಗಾಂಧಿ, ನನ್ನ ಆರೋಗ್ಯ ಈಗಿರುವ ಸ್ಥಿತಿಯಲ್ಲಿ ನಾನು ಹಂಗಾಮಿ ಅಧ್ಯಕ್ಷಳಾಗಿ ಕೆಲಸ ನಿರ್ವಹಿಸುವುದಕ್ಕೂ ಸಾಧ್ಯವಿಲ್ಲ ಎಂದಿದ್ದರು. ಆದರೂ ಪಟ್ಟು ಬಿಡದ ಕಾಂಗ್ರೆಸ್ಸಿಗರು ಮತ್ತೊಮ್ಮೆ ಅವರ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ.

ಗಾಂಧಿ ಕುಟುಂಬಸ್ಥರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೇ ಮಾಡಬಹುದು ಎಂಬ ಮಾತುಗಳೂ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+