Breaking; ಮಾಸ್ಕ್ ಕಡ್ಡಾಯ, ದೆಹಲಿಗೆ ಭೇಟಿ ನೀಡುವ ಮುನ್ನ ಓದಿ

ನವದೆಹಲಿ, ಏಪ್ರಿಲ್ 22; ನವದೆಹಲಿಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆ ತಡೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಶುಕ್ರವಾರ ದೆಹಲಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಖಾಸಗಿ ಕಾರುಗಳಲ್ಲಿ ಸಂಚಾರ ನಡೆಸುವ ಜನರು ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಲಾಗಿದೆ. ಈಗಾಗಲೇ ಹಲವು ರಾಜ್ಯಗಳು ಮಾಸ್ಕ್ ಕಡ್ಡಾಯಗೊಳಿಸಿದ್ದು, ಈಗ ಈ ಪಟ್ಟಿಗೆ ದೆಹಲಿ ಸೇರಿದೆ.

Mask Mandatory In Public Places Delhi Govt Issues Order

ನೋಯ್ಡಾದಲ್ಲಿ ಈಗಾಗಲೇ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಶುಕ್ರವಾರ ಮಾಸ್ಕ್ ಧರಿಸದ 100 ಜನರಿಗೆ ದಂಡವನ್ನು ಸಹ ವಿಧಿಸಲಾಗಿದೆ. ಬುಧವಾರ ದೆಹಲಿ ಲೆಫ್ಟಿನೆಂಟ್ ಗೌರ್ನರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ತೀರ್ಮಾನ ಕೈಗೊಳ್ಳಲಾಗಿತ್ತು.

ಇಂದು ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ದೆಹಲಿ ಸರ್ಕಾರ ಶಾಲೆಗಳಲ್ಲಿ ಕೋವಿಡ್ ಹರಡುವಿಕೆ ತಡೆ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ. ಶಾಲೆಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ ದೆಹಲಿಯಲ್ಲಿ 965 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ, 635 ಜನರು ಗುಣಮುಖಗೊಂಡಿದ್ದರು. ರಾಜ್ಯದ ಸಕ್ರಿಯ ಪ್ರಕರಣಗಳು 2,970 ಆಗಿದೆ. ಪಾಸಿಟಿವಿಟಿ ದರ ಶೇ 4.71.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+