ಇಂದು ಮಾಯಾವತಿ-ಅಖಿಲೇಶ್ ಜಂಟಿ ಪತ್ರಿಕಾಗೋಷ್ಠಿ
ನವದೆಹಲಿ, ಜನವರಿ 12: ಸಮಾಜವಾದಿ ಪಕ್ಷದ(ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ನಾಯಕಿ ಮಾಯಾವತಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಮಾಡಿಕೊಳ್ಳಲಿದ್ದು, ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದಾರೆ ಎನ್ನಲಾಗುತ್ತಿದೆ.

ಹಿಂದಿನ ಲೋಕಸಭಾ ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಗೆಲುವು ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ 2019ರ ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದ್ದು, ಸ್ಥಾನಗಳ ಹೊಂದಾಣಿಕೆ ಕುರಿತಂತೆ ಚರ್ಚೆ ಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಖಿಲೇಶ್- ಮಾಯಾವತಿ ಜಂಟಿ ಸುದ್ದಿಗೋಷ್ಠಿಯತ್ತ ಎಲ್ಲರ ಕಣ್ಣು!
ಎಸ್‌ಪಿ ಯ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ಹಾಗೂ ಬಿಎಸ್‌ಪಿ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಪ್ರತಿಕಾಗೋಷ್ಠಿ ಕುರಿತಂತೆ ಪ್ರಕಟಣೆ ಹೊರಡಿಸಿದ್ದಾರೆ.












Click it and Unblock the Notifications