ಮಾಯಾವತಿ ಪ್ರಚಾರ ನಿಷೇಧ ತೆರವಿಗೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ, ಏ.16: ಬಿಎಸ್‌ಪಿ ನಾಯಕಿ ಮಾಯಾವತಿಗೆ ಚುನಾವಣಾ ಆಯೋಗ ವಿಧಿಸಿದ್ದ 48 ಗಂಟೆಗಳ ಕಾಲ ಪ್ರಚಾರ ನಿಷೇಧವನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಲಾಗಿತ್ತು.

ಈ ಕುರಿತು ಚುನಾವಣಾ ಆಯೋಗ ನಿಷೇಧಾಜ್ಞೆ ಹಿಂಪಡೆಯುವಂತೆ ಕೋರಿ ಮಾಯಾವತಿ ಸುಪ್ರೀಂ ಮೆಟ್ಟಿಲೇರಿದ್ದರು. ಮಾಯಾವತಿ ಮನವಿಯನ್ನು ನಿರಾಕರಿಸಿದ ಪೀಠ ಚುನಾವಣಾ ಆಯೋಗದ ನಿರ್ಧಾರ ಸರಿ ಇದೆ ಎಂದು ಹೇಳಿದೆ.

Mayawati Gets No Reprieve From Ban, Supreme court

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಪ್ರಚೋದನಾಕಾರಿ ಭಾಷಣ ಮಾಡುವ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಈ ಅಧಿಕಾರವನ್ನು ಬಳಸಿಕೊಂಡು ಪ್ರಭಾವಿ ರಾಜಕಾರಣಿಗಳ ವಿರುದ್ಧ ಮೊದಲ ಬಾರಿ ಆಯೋಗ ಕ್ರಮ ಕೈಗೊಂಡಿದೆ. ಇದಕ್ಕಾಗಿ ಆಯೋಗವನ್ನು ಅಭಿನಂದಿಸುತ್ತೇವೆ ಎಂದು ಹೇಳಿ ಮಾಯಾವತಿ ಅರ್ಜಿಯನ್ನು ತಿರಸ್ಕರಿಸಿತು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಮಾಜಿ ಸಿಎಂ ಮಾಯಾವತಿ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಇದರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್​ ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಅದರಂತೆ ಆಯೋಗವು ಯೋಗಿ ಆದಿತ್ಯನಾಥ್​ ಅವರಿಗೆ 72 ಗಂಟೆ ಮತ್ತು ಮಾಯಾವತಿಗೆ 48 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧಿಸಿ ಸೋಮವಾರ ಆದೇಶಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+