• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಸರ್ಕಾರ ಹೇಳಿದ್ದಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಸಾವು: ಮೇಯರ್

|

ನವದೆಹಲಿ, ಏಪ್ರಿಲ್ 18: ದೆಹಲಿ ಸರ್ಕಾರ ಹೇಳಿದ್ದಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ದೆಹಲಿ ಮೇಯರ್ ತಿಳಿಸಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಲೆಕ್ಕದ ಪ್ರಕಾರ 193 ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ.

1.45 ಕೋಟಿಗೆ ತಲುಪಿದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ1.45 ಕೋಟಿಗೆ ತಲುಪಿದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ

ಆರೋಗ್ಯ ಇಲಾಖೆ ಹಂಚಿಕೊಂಡು ಮಾಹಿತಿ ಪ್ರಕಾರ, ಏಪ್ರಿಲ್ 16ರಂದು ದೆಹಲಿಯಲ್ಲಿ 141 ಮಂದಿ ಮೃತಪಟ್ಟಿದ್ದಾರೆ, ಆದರೆ ಶುಕ್ರವಾರ ದೆಹಲಿಯಲ್ಲಿ ಸಂಭವಿಸಿರುವ ಸಾವು 193 ಎಂದು ಮೇಯರ್ ತಿಳಿಸಿದ್ದಾರೆ.

ಕಳೆದ ವರ್ಷವೂ, ಕೊರೊನಾ ಸಾವುಗಳ ಕುರಿತಂತೆ ಎಎಪಿ ನೇತೃತ್ವದ ದೆಹಲಿ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ ಸ್ಥಳೀಯ ಸಂಸ್ಥೆಗಳ ನಡುವೆ ಭಿನ್ನಾಭಿಪ್ರಾಯದ ಮಾತುಗಳು ಕೇಳಿಬಂದಿದ್ದವು.

ದೆಹಲಿ ನಗರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 300 ಸ್ಥಳಗಳನ್ನು ನಿಗದಿಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಶನಿವಾರ 2,34,692 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ದೇಶದಲ್ಲಿ ಈವರೆಗೆ ದಾಖಲಾದ ಅತ್ಯಧಿಕ ದೈನಂದಿನ ಪ್ರಕರಣವಾಗಿದೆ. ಸತತ ಮೂರನೇ ದಿನ ದೇಶದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ದೇಶದ ಒಟ್ಟಾರೆ ಕೋವಿಡ್ ಸಂಖ್ಯೆ 1.45 ಕೋಟಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 1,341 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೆಯೇ 1,23,354 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣ 1,45,26,609ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 1,26,71,220 ಮಂದಿ ಚೇತರಿಸಿಕೊಂಡಿದ್ದಾರೆ.

English summary
More deaths from COVID-19 took place on Friday according to municipal records vis-a-vis the figures reported by the city government, North Delhi Mayor Jai Prakash claimed on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
loader
X