• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಹುಲ್ ಗಾಂಧಿ ಉತ್ತರಾಧಿಕಾರಿ ಯಾರು? ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಸಭೆ

|

ನವದೆಹಲಿ, ಮೇ 28: ಲೋಕಸಭೆ ಚುನಾವಣೆಯ ಕಳಪೆ ಪ್ರದರ್ಶನದ ಹೊಣೆಹೊತ್ತು ರಾಜೀನಾಮೆಗೆ ಮುಂದಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಉತ್ತರಾಧಿಕಾರಿ ಯಾರಾಗಬಲ್ಲರು ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

ಮಂಗಳವಾರ ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ದೌಡಾಯಿಸಿರುವ ಕಾಂಗ್ರೆಸ್ ಮುಖಂಡರು ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಉತ್ತರಾಧಿಕಾರ ಆಯ್ಕೆಯ ಬಗ್ಗೆ ಚರ್ಚೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಹೆಚ್ಚೂಕಡಿಮೆ ಅಧ್ಯಕ್ಷ ಪದವಿಯಿಂದ ರಾಹುಲ್ ಇಳಿಯುವುದು ಖಚಿತ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ, ಮುಖಂಡರಾದ ಕೆಸಿ ವೇಣುಗೋಪಾಲ್, ವಕ್ತಾರ ರಣದೀಪ್ ಸುರ್ಜೇವಾಲಾ ಮುಂತಾದವರು ಈಗಾಗಲೇ ರಾಹುಲ್ ಗಾಂಧಿ ಅವರ ನಿವಾಸಕ್ಕೆ ತೆರಳಿದ್ದಾರೆ.

ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದಕ್ಕೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿ ಸದಸ್ಯರೆಲ್ಲರೂ ಒಮ್ಮತದಿಂದ ತಮ್ಮ ಅಸಮ್ಮತಿ ಸೂಚಿಸಿದ ಕಾರಣ ಅವರ ರಾಜೀನಾಮೆಯನ್ನು ತಿರಸ್ಕರಿಸಲಾಗಿತ್ತು. ಆದರೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಅವರ ಮನವೊಲಿಕೆಯ ಯತ್ನವನ್ನು ಇಂದಿನ ಸಭೆಯಲ್ಲಿ ಮಾಡಲಾಗುತ್ತಿದೆ ಎನ್ನಲಾಗಿದೆ.

ರಾಹುಲ್ ರಾಜೀನಾಮೆ ನೀಡಿದರೆ ಬಿಜೆಪಿ ಬಲೆಗೆ ಬಿದ್ದಂತಾಗುತ್ತದೆ : ಪ್ರಿಯಾಂಕಾ ವಾದ್ರಾ

ಅಕಸ್ಮಾತ್ ರಾಹುಲ್ ಗಾಂಧಿ ಅವರು ತಮ್ಮ ನಿರ್ಧಾರದಿಂದ ಹಿಂದೆಸರಿಯದೆ ಇದ್ದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಇದೇ ವಾರ ಕಾಂಗ್ರೆಸ್ ಮುಖಂಡರು ಸಭೆ ನಡೆಸುವ ಸಾಧ್ಯತೆ ಇದೆ.

English summary
Who will be the president of Congress after Rahul Gandhi's resignation? The Congress party is planning to hold a meeting in this week to discuss possible candidates for Congress chief post. Amid this news, Congress leaders visited Rahul Gandhi'sresidence today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X