ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ ರಾಜ್ಯದಲ್ಲಿ ಪ್ರತಿಬಾರಿ ಮದುವೆ ಮುಂದೂಡಿಕೆಗೆ 'ಇದೊಂದೇ' ಕಾರಣ!

|
Google Oneindia Kannada News

ಶಿಲ್ಲಾಂಗ್, ಜೂನ್.16: ಕೊರೊನಾ ವೈರಸ್ ಹರಡುವಿಕೆ ಭೀತಿ ಮದುವೆ ಸಮಾರಂಭಗಳೆಲ್ಲ ಮುಂದೂಡಿಕೆ ಆಗುತ್ತಿವೆ. ಮದುವೆ ಆಗಲು ಅಣಿಯಾಗಿದ್ದ ಜೋಡಿಗಳಿಗೆ ಮೇಘಾಲಯ ರಾಜ್ಯ ಸರ್ಕಾರವು ಸಿಹಿಸುದ್ದಿಯನ್ನು ನೀಡಿದೆ.

Recommended Video

Careful! Your sanitizer may be poisonous, CBI issues alert for the first time | Oneindia Kannada

ಲಾಕ್ ಡೌನ್ ನಡುವೆ ಬಂದ್ ಆಗಿರುವ ಧಾರ್ಮಿಕ ಕೇಂದ್ರಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸುವುದಕ್ಕೆ ಸರ್ಕಾರವು ಅನುಮತಿ ನೀಡಿದೆ. ಧಾರ್ಮಿಕ ಸಂಸ್ಥೆಗಳು ಸಲ್ಲಿಸಿದ ಮನವಿ ಮೇರೆಗೆ ಸರ್ಕಾರವು ಈ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ತ್ರೈಸಾಂಗ್ ತಿಳಿಸಿದ್ದಾರೆ.

ಹೊಸ ಕಾನೂನು: 18ರ ವಯಸ್ಸಿನಲ್ಲೇ ಯುವತಿಯರ ಮದುವೆಗಿಲ್ಲ ಅನುಮತಿ! ಹೊಸ ಕಾನೂನು: 18ರ ವಯಸ್ಸಿನಲ್ಲೇ ಯುವತಿಯರ ಮದುವೆಗಿಲ್ಲ ಅನುಮತಿ!

ವಿವಿಧ ಧಾರ್ಮಿಕ ಮುಖಂಡರ ಜೊತೆಗೆ ನಡೆಸಿದ ಸಭೆ ಬಳಿಕ ಮೇಘಾಲಯ ಉಪಮುಖ್ಯಮಂತ್ರಿ ಪ್ರೆಸ್ಟೋನ್ ತ್ರೈಸಾಂಗ್ ಈ ಕುರಿತು ಮಾಹಿತಿ ನೀಡಿದರು. ಧಾರ್ಮಿಕ ಕೇಂದ್ರಗಳಲ್ಲಿ ಮದುವೆಯನ್ನು ನಡೆಸುವುದಕ್ಕೆ ಅವಕಾಶವನ್ನು ನೀಡಲಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಸರ್ಕಾರ ಮುಂದಿನ ಆದೇಶ ಹೊರಡಿಸುವವರೆಗೂ ಧಾರ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ. ಮೊದಲಿನಂತೆ ಪೂಜೆ-ಪುನಸ್ಕಾರ ಪ್ರಾರ್ಥನೆಗಳನ್ನು ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಮುಂದುವರಿಕೆ

ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಮುಂದುವರಿಕೆ

ಮೇಘಾಲಯದಲ್ಲಿ ಇರುವ ಧಾರ್ಮಿಕ ಕೇಂದ್ರಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸುವುದಕ್ಕೇನೋ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕರಿಗೆ ಮೊದಲಿನಂತೆ ನಿರ್ಬಂಧ ಮುಂದುವರಿಸಲಾಗಿದೆ. ಸರ್ಕಾರ ಆದೇಶ ಹೊರಡಿಸುವವರೆಗೂ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರೆಸ್ಟೋನ್ ತ್ರೈಸಾಂಗ್ ತಿಳಿಸಿದ್ದಾರೆ.

ಧಾರ್ಮಿಕ ಕೇಂದ್ರಗಳಲ್ಲಿ ವಿವಾಹಕ್ಕೆ ಪೂರ್ವಾನುಮತಿ

ಧಾರ್ಮಿಕ ಕೇಂದ್ರಗಳಲ್ಲಿ ವಿವಾಹಕ್ಕೆ ಪೂರ್ವಾನುಮತಿ

ಇನ್ನು, ಧಾರ್ಮಿಕ ಕೇಂದ್ರಗಳಲ್ಲಿ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಕೆಲವು ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿದೆ. ಇದರ ಜೊತೆಗೆ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ವಿವಾಹ ಸಮಾರಂಭಕ್ಕೆ ಸಂಬಂಧಿಸಿದಂತೆ ಮೊದಲೇ ಡೆಪ್ಯೂಟಿ ಕಮೀಷನರ್ ರಿಂದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತು ಎಲ್ಲ ಡೆಪ್ಯುಟಿ ಕಮೀಷನರ್ ಗಳಿಗೆ ಸರ್ಕಾರವು ಸೂಚನೆಯನ್ನು ನೀಡಿದೆ.

ಮದುವೆಗಳೆಲ್ಲ ಮುಂದೂಡಿಕೆ ಆಗುವುದಕ್ಕೆ 'ಇದೇ' ಕಾರಣ!

ಮದುವೆಗಳೆಲ್ಲ ಮುಂದೂಡಿಕೆ ಆಗುವುದಕ್ಕೆ 'ಇದೇ' ಕಾರಣ!

ಮೇಘಾಲಯ ಹೇಳಿ ಕೇಳಿ ಅತಿಹೆಚ್ಚು ಕ್ರಿಶ್ಚಿಯನ್ನರನ್ನು ಹೊಂದಿರುವ ರಾಜ್ಯ. ಇಲ್ಲಿ ಬಹುತೇಕ ಜನರ ಮದುವೆ ಸಮಾರಂಭಗಳೆಲ್ಲ ಚರ್ಚ್ ಗಳಲ್ಲಿಯೇ ನಡೆಯುತ್ತವೆ. ಕಳೆದ ಕೆಲವು ತಿಂಗಳುಗಳಿಂದ ಕೊರೊನಾ ವೈರಸ್ ಭೀತಿ ಹಿನ್ನೆಲೆ ಚರ್ಚ್ ಗಳೆಲ್ಲ ಬಂದ್ ಆಗಿವೆ. ಹೀಗಾಗಿ ಸಾಕಷ್ಟು ಮದುವೆಗಳು ಮುಂದೂಡಿಕೆಯಾಗುತ್ತಿವೆ.

ಧಾರ್ಮಿಕ ಕೇಂದ್ರಗಳಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ

ಧಾರ್ಮಿಕ ಕೇಂದ್ರಗಳಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ

ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳಲ್ಲಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮದುವೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಮದುವೆ ಸಮಾರಂಭ ನಡೆಯುವ ಪ್ರದೇಶವನ್ನು ಸ್ಯಾನಿಟೈಸ್ ಮಾಡುವುದು ಸೇರಿದಂತೆ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿದೆ.

English summary
Meghalaya government has decided to allow wedding ceremonies in religious places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X