ಪೊಂಪಿಯೋ-ಮೋದಿ ಭೇಟಿ: ಮಹತ್ವದ ವಿಷಯಗಳ ಕುರಿತು ಚರ್ಚೆ

ನವದೆಹಲಿ, ಜೂನ್ 26: ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೋ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರ ನಡುವೆ ಮಹತ್ವದ ಮಾತುಕತೆ ನಡೆದಿದ್ದು, ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯ ವೃದ್ಧಿಗೆ ಇದು ನಾಂದಿ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಭಯೋತ್ಪಾದನೆ, ಎಚ್ 1 ಬಿ ವೀಸಾ ಬಗೆಗಿನ ಗೊಂದಲ, ವ್ಯಾಪಾರ, ಆದ್ಯತಾ ವಹಿವಾಟಿನ ಕುರಿತ ವಿವಾದ, ರಷ್ಯಾದೊಂದಿಗೆ ಭಾರತದ ಶಸ್ತ್ರಾಸ್ತ್ರ ಒಪ್ಪಂದ ಸೇರಿದಂತೆ ಹಲವು ಮಹತ್ವದ ಮಾತುಕತೆಗಳು ನಾಯಕರ ನಡುವೆ ನಡೆದಿವೆ ಎನ್ನಲಾಗಿದೆ.

Mike Pompeo meets Prime Minister Narendra Modi in New Delhi

ಇಂದು ಮಧ್ಯಾಹ್ನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಪೊಂಪಿಯೋ ಭೇಟಿಯಾಗಲಿದ್ದು, ಈ ಎಲ್ಲ ವಿಷಯಗಳ ಬಗ್ಗೆ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಆದ್ಯತೆಯ ವಹಿವಾಟಿನ(Generalized System of Preferences) ಅಡಿಯಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ 5.6 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಭಾರತೀಯ ವಸ್ತುಗಳ ಮೇಲಿದ್ದ ಸುಂಕರಹಿತ ರಫ್ತು ಸೌಲಭ್ಯವನ್ನು ಅಮೆರಿಕ ವಾಪಸ್ ಪಡೆದ ನಂತರ ಮೊದಲ ಬಾರಿಗೆ ಪೊಂಪಿಯೋ ಭಾರತಕ್ಕೆ ಭೇಟಿ ನೀಡುತ್ತಿದ್ದು, ಈ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಜೊತೆಗೆ ಅಮೆರಿಕದಲ್ಲಿ ಉದ್ಯೋಗ ಮಾಡುತ್ತಿರುವ ಅನ್ಯದೇಶಿಯರಿಗೆ ನೀಡುವ H-1B ವೀಸಾ ಕಡಿತಕ್ಕೆ ಅಮೆರಿಕ ಮುಂದಾಗಿದೆ ಎಂಬ ಮಾಧ್ಯಮಗಳ ವರದಿಯ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+