ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓಮಿಕ್ರಾನ್ ಎದುರಿಸಲು ಭಾರತ ಸಜ್ಜಾಗಿದೆಯೇ?, ಮಾಂಡವೀಯ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಡಿಸೆಂಬರ್ 21: ದೇಶದಲ್ಲಿ ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿವೆ. ಕೊರೊನಾದ ಮೂರನೇ ಅಲೆ ಶುರುವಾಗಲಿದೆಯೇ ಎಂಬ ಭಯದಲ್ಲಿ ಜನತೆ ಇದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾತನಾಡಿ, ''ಭಾರತವು ಓಮಿಕ್ರಾನ್ ಎದುರಿಸಲು ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ದೇಶದಲ್ಲಿ ತಿಂಗಳ ಕೊರೊನಾ ಲಸಿಕೆ ಉತ್ಪಾದನಾ ಸಾಮರ್ಥ್ಯ 45 ಕೋಟಿಗೆ ಹೆಚ್ಚಿಸಲಾಗುವುದು, ಇದು ಕೊರೊನಾ ವಿರುದ್ಧ ರಕ್ಷಣೆಯನ್ನು ನೀಡುತ್ತದೆ, " ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಸಚಿವರು, ವಿವಿಧ ರಾಜ್ಯಗಳಿಗೆ 48,000 ವೆಂಟಿಲೇಟರ್‌ಗಳನ್ನು ಒದಗಿಸಲಾಗಿದೆ, ಇದು ಹೊಸ ರೂಪಾಂತರಿ ಓಮಿಕ್ರಾನ್ ವಿರುದ್ಧ ಹೋರಾಡಲು ಸಹಾಯಕ. ದೇಶದಲ್ಲಿ ಶೇ.88ರಷ್ಟು ಮಂದಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, ಶೇ.58ರಷ್ಟು ಮಂದಿಗೆ ಎರಡನೇ ಡೋಸ್ ನೀಡಲಾಗಿದೆ. ಭಾರತದಲ್ಲಿ ಇದುವರೆಗೆ 200 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ, ಓಮಿಕ್ರಾನ್ ಎದುರಿಸಲು ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯುಕೆಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯುಕೆಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ

ಸರ್ಕಾರವು ಹೆಚ್ಚು ಓಮಿಕ್ರಾನ್ ಪ್ರಕರಣಗಳಿರುವ ದೇಶಗಳನ್ನು ಪಟ್ಟಿ ಮಾಡಿದೆ, ಈ ದೇಶಗಳಿಂದ ಬರುವವರಿಗೆ ಏಳು ದಿನಗಳ ಕ್ವಾರಂಟೈನ್ ವಿಧಿಸಲಾಗುತ್ತಿದೆ. ಬಳಿಕ ಮತ್ತೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಹೊಸ ಕೋವಿಡ್ ರೂಪಾಂತರಿಯು 89 ದೇಶಗಳಲ್ಲಿ ಪತ್ತೆಯಾಗಿದೆ.

Minister Mansukh Mandaviya Says India Prepared To Tackle Omicron Cases

ಓಮಿಕ್ರಾನ್‌ ರೋಗಿಗಳು ತೀವ್ರ ಸುಸ್ತು, ಸೌಮ್ಯವಾದ ಸ್ನಾಯು ನೋವು, ಗಂಟಲು ಕೆರೆತ ಮತ್ತು ಒಣ ಕೆಮ್ಮನ್ನು ವರದಿ ಮಾಡಿದ್ದಾರೆ ಎಂದು ವೈದ್ಯೆ AFPಗೆ ತಿಳಿಸಿದ್ದಾರೆ. ಕೆಲವರು ಮಾತ್ರ ಸ್ವಲ್ಪ ಹೆಚ್ಚಿನ ತಾಪಮಾನ ಹೊಂದಿದ್ದರು ಎಂದೂ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ರೋಗಿಗಳು ಲಕ್ಷಣ ರಹಿತರಾಗಿದ್ದಾರೆ. ವರದಿಗಳ ಪ್ರಕಾರ, ಇತರ ದೇಶಗಳಲ್ಲಿ ಈ ಹೊಸ ರೂಪಾಂತರದೊಂದಿಗೆ ಕಂಡುಬಂದ ರೋಗಿಗಳು ತೀವ್ರ ಅನಾರೋಗ್ಯವನ್ನು ವರದಿ ಮಾಡಿಲ್ಲ ಮತ್ತು ಆಸ್ಪತ್ರೆಗೆ ದಾಖಲಾಗದೆ ಚೇತರಿಸಿಕೊಂಡಿದ್ದಾರೆ. ಗಂಟಲು ಕೆರೆತ, ವಿಪರೀತ ಸುಸ್ತು, ಲಘು ಜ್ವರ ಇವು ಈ ಓಮಿಕ್ರಾನ್​​ನ ಕೆಲವು ಲಕ್ಷಣಗಳಾಗಿವೆ. ದೇಶದಲ್ಲಿ ಪತ್ತೆಯಾದ ಒಮಿಕ್ರಾನ್ ಕೊರೋನಾ ವೈರಸ್ ರೂಪಾಂತರದ ಒಟ್ಟು 19 ಪ್ರಕರಣಗಳಲ್ಲಿ 16 ಲಕ್ಷಣರಹಿತವಾಗಿವೆ.

ಓಮಿಕ್ರಾನ್ ನ ಗುಣಲಕ್ಷಣಗಳು ಏನು? ಇದು ಎಷ್ಟು ಅಪಾಯಕಾರಿ?

* ಓಮಿಕ್ರಾನ್ ಸೋಂಕಿತ ಅನೇಕ ಜನರು ಲಕ್ಷಣ ರಹಿತವಾಗಿದ್ದಾರೆ.
* ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
* ಒಂದು ಅಥವಾ ಎರಡು ದಿನಗಳವರೆಗೆ ಸುಸ್ತು ಇರಲಿದೆ.
*ಆದಾಗ್ಯೂ ಓಮಿಕ್ರಾನ್ ರೂಪಾಂತರ ಯಾವುದೇ ಹೊಸ ವೈಶಿಷ್ಠ್ಯಗಳು ಇಲ್ಲಿಯವರೆಗೆ ಕಂಡುಬಂದಿಲ್ಲ.
* ಗಂಟಲು ನೋವು, ತಲೆನೋವು, ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಳ್ಳಲಿದೆ.
* ಓಮಿಕ್ರಾನ್ 3ನೇ ಅಲೆ ಅನ್ನೋದು ಹಲವು ತಜ್ಞರ ಅಭಿಪ್ರಾಯ.
* ಹೊಸ ರೂಪಾಂತರಿ ಡೆಲ್ಟಾಕ್ಕಿಂತ ಹಲವಾರು ಪಟ್ಟು ಹೆಚ್ಚು ಮಾರಕ.
* ಓಮಿಕ್ರಾನ್ ಹೊಸ ರೂಪಾಂತರಿ ಡೆಲ್ಟಾಕ್ಕಿಂತ 7 ಪಟ್ಟು ವೇಗವಾಗಿ ಹರಡುತ್ತಿದೆ.
* ಹೊಸ ರೂಪಾಂತರಿಯನ್ನು ಗುರುತಿಸುವುದಕ್ಕೂ ಮುನ್ನ 32 ಬಾರಿ ರೂಪಾಂತರಗೊಂಡಿದೆ.
* ಸದ್ಯಕ್ಕೆ ಭಾರತದಲ್ಲಿ ಈ ರೂಪಾಂತರದ ಯಾವುದೇ ಪ್ರಕರಣ ದೃಢಪಟ್ಟಿಲ್ಲ.

ಹೊಸ ರೂಪಾಂತರವನ್ನು ತಪ್ಪಿಸಲು ಕೇಂದ್ರ ಸರ್ಕಾರ ಹಾಗೂ ಡಬ್ಲ್ಯುಎಚ್ಒ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕ. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಅಲ್ಲದೆ, ಎಲ್ಲಾ ತಜ್ಞರು ಲಸಿಕೆ ಪಡೆಯಲು ಸಲಹೆ ನೀಡುತ್ತಿದ್ದಾರೆ.

English summary
As the number of Omicron cases increases around the country, many are concerned if it will trigger a third wave of the COVID-19 pandemic in the coming days. Easing these fears, Union Health Minister Mansukh Mandaviya has assured the citizens in his latest statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X