ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾರ್ಕಿಂಗ್ ಗಲಾಟೆಯಿಂದ ಕೋಮು ಗಲಾಟೆಯತ್ತ ರಾಷ್ಟ್ರ ರಾಜಧಾನಿ

|
Google Oneindia Kannada News

ನವದೆಹಲಿ, ಜು.2: ರಾಷ್ಟ್ರ ರಾಜಧಾನಿಯ ಹಾಜಿ ಖಾಜಿ ವಲಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ಆರಂಭವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯದ ಯುವಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವು ವಿಕೋಪಕ್ಕೆ ತೆರಳಿದ ಬೆನ್ನಲ್ಲೇ ಸ್ಥಳೀಯ ದೇವಸ್ಥಾನವೊಂದಕ್ಕೆ ಗುಂಪಿನಲ್ಲಿದ್ದ ಜನ ಹಾನಿ ಉಂಟು ಮಾಡಿದ್ದಾರೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದು, ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.

Miscreants vandalised temple become central point to a communal conflict

ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ. ಧರ್ಮ ಸೂಕ್ಷ್ಮತೆ ಹಿನ್ನೆಲೆಯಲ್ಲಿ ಶಾಂತಿ ಮರುಸ್ಥಾಪನೆ ಬಳಿಕವೂ ಸ್ಥಳದಲ್ಲಿ ಪೊಲೀಸರು ನಿಯೋಜನನೆ ಮುಂದುವರೆಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಆಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

English summary
Miscreants vandalized temple in Old Delhi's Chandni Chowk area. It becomes a central point to a communal conflict in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X