• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಸುತ್ತಮುತ್ತಲ ಪ್ರದೇಶದಲ್ಲಿ ಎರಡನೇ ದಿನವು ಮುಂದುವರೆದ ಭಾರಿ ಮಳೆ

|

ನವದೆಹಲಿ, ಜನವರಿ 03: ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಒಂದು ದಿನದಿಂದ ಭಾರಿ ಮಳೆಯಾಗುತ್ತಿದೆ.

ಎರಡನೇ ದಿನವೂ ಮಳೆ ಮುಂದುವರೆದಿದೆ, ಸಾಕಷ್ಟು ಪ್ರದೇಶಗಳಲ್ಲಿ ನೀರು ನಿಂತಿದೆ. ಆಯನಗರ, ದೇರಾಮಂಡಿ, ತುಘ್ಲಕಾಬಾದ್ ಹಾಗೂ ಹರ್ಯಾಣದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಗೊಹನಾ, ಪಾಣಿಪತ್, ಸೋಹ್ನಾ, ಫರೀದಾಬಾದ್, ಬಲ್ಲಬಗಢ, ಹರ್ಯಾಣದಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದೆಹಲಿಯಲ್ಲಿ ಶನಿವಾರ 7 ಡಿಗ್ರಿ ಸೆಲ್ಸಿಯಸ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. 2006ರ ಜನವರಿ 08ರಂದು 0.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. 1935ರ ಜನವರಿಯಲ್ಲಿ 0.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.

ಕಳೆದ ವರ್ಷ ಜನವರಿಯಲ್ಲಿ 2.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು. ಮೂರು ದಿನಗಳ ಹಿಂದೆ ದೆಹಲಿಯಲ್ಲಿ 1.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

ಮುಂದಿನ ಒಂದೆರೆಡು ದಿನಗಳ ಕಾಲ ದೆಹಲಿ ಹಾಗೂ ಹರ್ಯಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
Heavy rains continued to lash the national capital and nearby areas for the second consecutive day today leading to water-logging in many areas of the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X