ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನವಸಂಪನ್ಮೂಲ ಸಚಿವಾಲಯ(HRD)ದ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಜುಲೈ.29: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ(Ministry of Human Resource and Development)ದ ಹೆಸರನ್ನು ಶಿಕ್ಷಣ ಸಚಿವಾಲಯ(Ministry of Education) ಎಂದು ಮರುನಾಮಕರಣ ಮಾಡಲಾಗಿದೆ.

ಕೇಂದ್ರ ಸಚಿವ ಸಂಪುಟವು ಹೆಚ್ಆರ್ ಡಿ ಮರುನಾಮಕರಣಕ್ಕೆ ಅನುಮೋದನೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಬುಧವಾರ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಸಚಿವಾಲಯದ ಹೆಸರನ್ನು ಬದಲಾಯಿಸುವಂತೆ ಶಿಫಾರಸ್ಸು ಮಾಡಲಾಗಿತ್ತು.

ಸಂಪುಟ ಸಭೆ ಬಳಿಕ ಕೇಂದ್ರ ಸಚಿವರ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳುಸಂಪುಟ ಸಭೆ ಬಳಿಕ ಕೇಂದ್ರ ಸಚಿವರ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು

ಕಳೆದ 1985ರಲ್ಲಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ರಚಿಸಲಾಗಿತ್ತು. ಅದೇ ಸಚಿವಾಲಯಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣಗೊಳಿಸಿದೆ.

Modi Cabinet Renamed HRD Ministry As Ministry Of Education

ಶಿಕ್ಷಣ ಸಚಿವಾಲಯದ ಹೆಸರು ಬದಲಾಯಿಸಿದ್ದ ರಾಜೀವ್ ಗಾಂಧಿ:

ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಮತ್ತೆ ಬದಲಾಯಿಸುವಂತೆ ಇಸ್ರೋದ ಮಾಜಿ ಮುಖ್ಯಸ್ಥ ಕೆ.ಕಸ್ತೂರಿ ರಂಗನ್ ನೇತೃತ್ವದ ತಜ್ಞರ ತಂಡವು ಶಿಫಾರಸ್ಸು ಮಾಡಿದೆ. ಆರ್ಎಸ್ಎಸ್ ಸಲ್ಲಿಸಿದ ಅಫಿಡಿವಿಟ್ ನಲ್ಲಿಯೂ ಈ ಬಗ್ಗೆ ಉಲ್ಲೇಖಿಸಲಾಗಿದೆ. 1985ರಲ್ಲಿ ಕೆಲವು ಜನರು ಅಂದಿನ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರನ್ನು ತಪ್ಪು ದಾರಿಗೆ ಎಳೆಯುವುದಕ್ಕಾಗಿ ಶಿಕ್ಷಣ ಸಚಿವಾಲಯಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಂದು ಹೆಸರು ಬದಲಾಯಿಸಿದ್ದರು.

ಕೇಂದ್ರ ಸರ್ಕಾರವು ಸಚಿವಾಲಯದ ಹೆಸರನ್ನು ಬದಲಾಯಿಸಿದ ಹಿಂದಿನ ಉದ್ದೇಶ ಈ ಸಚಿವಾಲಯವು ಕೇವಲ ಶಿಕ್ಷಣ ಮತ್ತು ಕಲಿಕೆಗೆ ಸಂಬಂಧಿಸಿದಂತೆ ಹೆಚ್ಚು ನಿಗಾ ವಹಿಸುವುದೇ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

1986ರಲ್ಲಿ ದೇಶದಲ್ಲಿ ಜಾರಿಗೊಳಿಸಿದ ಶಿಕ್ಷಣ ನೀತಿಯನ್ನು 1992ರಲ್ಲಿ ಪರಿಷ್ಕರಿಸಲಾಗಿದ್ದು, ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲಕರವಾಗಿತ್ತು. ಶಿಕ್ಷಣ ಹಕ್ಕು ಕಾಯ್ದೆ 2009 ಅಡಿಯಲ್ಲಿ 3 ರಿಂದ 18 ವರ್ಷದ ವಿದ್ಯಾರ್ಥಿಗಳ ಶಾಲಾ ಶಿಕ್ಷಣ ಪಠ್ಯಕ್ರಮದಲ್ಲಿ ವಿಷಯದ ಹೊರೆ ಕಡಿಮೆ ಮಾಡಲಿದೆ.

English summary
Prime Minister Narendra Modi Cabinet Renamed Ministry of Human Resource And Development As Ministry Of Education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X