ಥೇಮ್ಸ್ ದಡದಲ್ಲಿ ಬಸವಣ್ಣನ ಪುತ್ಥಳಿ, ಮೋದಿಗೆ ಆಹ್ವಾನ
ನವದೆಹಲಿ, ಮಾ. 26 : ಹನ್ನೆರಡನೇ ಶತಮಾನದ ಪ್ರಮುಖ ವಚನಕಾರ, ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ತತ್ತ್ವಜ್ಞಾನಿ ಜಗಜ್ಯೋತಿ ಬಸವೇಶ್ವರ ಅವರ ಕಂಚಿನ ಪುತ್ಥಳಿಯನ್ನು ಲಂಡನ್‌ನ ಥೇಮ್ಸ್ ನದಿಯ ದಡದ ಮೇಲೆ ಅನಾವರಣಗೊಳಿಸಲು ಸರ್ವಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ.
ಲ್ಯಾಂಬೆತ್‌ನ ಮಾಜಿ ಮೇಯರ್ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರು ಮಂಗಳವಾರ, ಮಾ.24ರಂದು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪುತ್ಥಳಿ ಅನಾವರಣಗೊಳಿಸಲು ಬ್ರಿಟನ್ನಿನಲ್ಲಿರುವ ಭಾರತೀಯರ ಪರವಾಗಿ ಆಹ್ವಾನ ನೀಡಿದರು. ಮುಂದಿನ ಬಾರಿ ಲಂಡನ್ ಪ್ರವಾಸ ಕೈಗೊಂಡಾಗ ಬಸವಣ್ಣನ ಮೂರ್ತಿ ಅನಾವರಣಗೊಳಿಸಲು ಕೋರಲಾಗಿದೆ. [ಬಸವಣ್ಣನ ವಚನಗಳು ಮೊಬೈಲಿನಲ್ಲಿ]

ಈ ಸಂದರ್ಭದಲ್ಲಿ, ಹನ್ನೆರಡನೇ ಶತಮಾನದಲ್ಲಿ ಜಾತಿ, ಮತ, ಲಿಂಗ ಭೇದವನ್ನು ತಿರಸ್ಕರಿಸಿ ಸಾಮಾಜಿಕ ಕ್ರಾಂತಿಗೆ ಕಾರಣರಾದ ಬಸವಣ್ಣನವರನ್ನು ಮತ್ತು ಅವರ ಬೋಧನೆಗಳನ್ನು ಅಪಾರವಾಗಿ ಮೆಚ್ಚಿಕೊಂಡಿದ್ದೇನೆ ಎಂದು ನರೇಂದ್ರ ಮೋದಿ ಅವರು ನೀರಜ್ ಪಾಟೀಲ್ ಅವರಿಗೆ ತಿಳಿಸಿದರು. ಪಾಟೀಲ್ ಅವರು ಮೋದಿಗೆ ಬಸವಣ್ಣನ ಪ್ರತಿಕೃತಿಯನ್ನು ನೀಡಿದರು.
ಬ್ರಿಟಿಷ್ ಪಾರ್ಲಿಮೆಂಟಿನ ಎದುರಿನಲ್ಲಿ, ಥೇಮ್ಸ್ ನದಿಯ ದಡದಲ್ಲಿ, ಐತಿಹಾಸಿಕ ಅಲ್ಬರ್ಟ್ ಎಂಬ್ಯಾಂಕ್ಮೆಂಟ್ ಮೇಲೆ, ಬಿಗ್ ಬೆನ್ ಎದುರು ಬಸವೇಶ್ವರ ಅವರ ಕಂಚಿನ ಪುತ್ಥಳಿಯ ಅನಾವರಣಕ್ಕಾಗಿ ಬ್ರಿಟಿಷ್ ಪಾರ್ಲಿಮೆಂಟಿನ ಅನುಮತಿ ಪಡೆಯಲು ಭಾರತೀಯರು ನಡೆಸಿದ ಪ್ರಯತ್ನವನ್ನು ಮೋದಿ ಶ್ಲಾಘಿಸಿದರು. [ಬ್ರಿಟನ್ನಿನಿಂದ ಬಸವೇಶ್ವರ ಮೂರ್ತಿ ಸ್ಥಾಪನೆಗೆ ಒಪ್ಪಿಗೆ]
ಮೇ 2015ರಲ್ಲಿ ಬ್ರಿಟನ್ನಿನಲ್ಲಿ ನಡೆಯಲಿರುವ ಮಹಾ ಚುನಾವಣೆಯ ನಂತರ ಜೂನ್ ಅಥವಾ ಜುಲೈ ತಿಂಗಳಲ್ಲಿ ನರೇಂದ್ರ ಮೋದಿ ಅವರು ಬ್ರಿಟನ್ನಿಗೆ ಭೇಟಿ ಕೊಡುವ ಸಂಭವನೀಯತೆಯಿದ್ದು, ಆ ಸಮಯದಲ್ಲಿ ಪ್ರತಿಮೆ ಅನಾವರಣಗೊಳ್ಳಲಿದೆ. ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಭಾರತದ ಸಂಸತ್ತಿನಲ್ಲಿಯೂ ಬಸವಣ್ಣನವರ ಪ್ರತಿಮೆ ಅನಾವರಣಗೊಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications