ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಭಾರತ್ ಮಾತಾ ಕೀ ಜೈ' ಘೋಷಣೆ ದುರ್ಬಳಕೆ: ಸಿಂಗ್ ವಿರುದ್ಧ ಮೋದಿ ಟೀಕೆ

|
Google Oneindia Kannada News

ದೆಹಲಿ, ಮಾರ್ಚ್ 3: ಭಾರತ ದೇಶದ ಏಕತೆ ಹಾಗೂ ಭಾವೈಕ್ಯತೆಯ ಸಂಕೇತವಾಗಿರುವ 'ಭಾರತ್ ಮಾತಾ ಕೀ ಜೈ' ಘೋಷಣೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

'ಭಾರತ್ ಮಾತಾ ಕೀ ಜೈ ಎಂದು ಹೇಳುವುದು ಕೂಡ ಕೆಲವರಿಗೆ ಸಮಸ್ಯೆಯಾಗುತ್ತಿದೆಯಂತೆ, ಭಾರತ್ ಮಾತಾ ಕೀ ಜೈ ಎಂದು ಹೇಳುವಾಗಲು ದುರ್ವಾಸನೆ ಬೀರುತ್ತಿದ್ದಾರೆ' ಎಂದು ಹೇಳುವ ಮೂಲಕ ಸಿಂಗ್ ಗೆ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಉಸಾಬರಿಯಿಂದ ದೂರ ಉಳಿಯುವ ಮನಸ್ಸು ಮಾಡಿದ ಪ್ರಧಾನಿ ಮೋದಿಸಾಮಾಜಿಕ ಜಾಲತಾಣ ಉಸಾಬರಿಯಿಂದ ದೂರ ಉಳಿಯುವ ಮನಸ್ಸು ಮಾಡಿದ ಪ್ರಧಾನಿ ಮೋದಿ

ಮಂಗಳವಾರ ಬಿಜೆಪಿಯ ಸಂಸದೀಯ ಮಂಡಳಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, 'ಈ ಹಿಂದೆ ವಂದೇ ಮಾತರಂಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಈಗ ಭಾರತ್ ಮಾತಾ ಕಿ ಜೈಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ' ಎಂದಿದ್ದಾರೆ. ತಮ್ಮ ಭಾಷಣದಲ್ಲಿ ಮನಮೋಹನ್ ಸಿಂಗ್ ಹೆಸರು ಎಲ್ಲೂ ಉಲ್ಲೇಖಿಸದ ಮೋದಿ ಪರೋಕ್ಷವಾಗಿ ಸಿಂಗ್ ಹೇಳಿಕೆಯನ್ನು ಖಂಡಿಸಿದ್ದಾರೆ.

Modi Slams Manmohan Singh Over Bharat Mata Ki Jai Slogan

ಇನ್ನು ವಿರೋಧ ಪಕ್ಷಗಳನ್ನು ಟೀಕಿಸಿದ ಮೋದಿ ''ಕೆಲವರು ತಮ್ಮ ಪಕ್ಷಕ್ಕಾಗಿ ಹೋರಾಡುತ್ತಿದ್ದಾರೆ, ಆದರೆ ನಾವು ದೇಶಕ್ಕಾಗಿ ಹೋರಾಡುತ್ತಿದ್ದೇವೆ'' ಎಂದು ಸಂಸದರನ್ನು ಉದ್ದೇಶಿಸಿ ಭಾಷಣ ಮಾಡಿದರು.

ನಾನು ರಾಜೀನಾಮೆ ಕೊಡಲೇ ಎಂದು ಕೇಳಿದ್ದ ಮನಮೋಹನ್ ಸಿಂಗ್ನಾನು ರಾಜೀನಾಮೆ ಕೊಡಲೇ ಎಂದು ಕೇಳಿದ್ದ ಮನಮೋಹನ್ ಸಿಂಗ್

ಇದಕ್ಕೂ ಮುಂಚೆ ದೆಹಲಿಯ ಇಂಡಿಯಾ ಹೆಬಿಟೆಟ್ ಸೆಂಟರ್ನಲ್ಲಿ ಪ್ರೊ.ಕೆಇ ರಾಧಾಕೃಷ್ಣ ಅನುವಾದಿಸಿದ 'ಯಾರು ಭಾರತ ಮಾತೆ' ಪುಸ್ತುಕ ಬಿಡುಗಡೆ ಮಾಡಿ ಮಾತನಾಡಿದ ಮನಮೋಹನ್ ಸಿಂಗ್ ''ಇತಿಹಾಸ ಓದಿದವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಬಗ್ಗೆ ತಪ್ಪಾಗಿ ಮಾತನಾಡುತ್ತಿದ್ದಾರೆ. ವಿಶ್ವ ವೇದಿಕೆಯಲ್ಲಿ ಭಾರತವು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿಂತಿರುವುದರ ಹಿಂದೆ ಪ್ರಮುಖ ಶಕ್ತಿಯಾಗಿ ಕಾಣುತ್ತಿರುವುದು ದೇಶದ ಮೊದಲ ಪ್ರಧಾನಿ ನೆಹರೂ ಅವರ ಪರಿಶ್ರಮ'' ಎಂದಿದ್ದರು.

Modi Slams Manmohan Singh Over Bharat Mata Ki Jai Slogan

''ಲಕ್ಷಾಂತರ ಜನರು, ಸಂಪೂರ್ಣ ಭಾವನಾತ್ಮಕ ಕಲ್ಪನೆಯ ಭಾರತ ನಿರ್ಮಿಸುವ ಸಲುವಾಗಿ ರಾಷ್ಟ್ರವಾದ ಮತ್ತು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ'' ಎಂದು ಹೇಳಿದ್ದರು. ಈ ಹೇಳಿಕೆಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.

English summary
Prime Minister Narendra Modi slams ex prime minister manmohan singh over Bharat mata ki jai slogan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X