ಉಕ್ರೇನ್-ರಷ್ಯಾ ಬಿಕ್ಕಟ್ಟು: ಪುಟಿನ್ ಜೊತೆ ಮೋದಿ ಮಹತ್ವದ ಮಾತುಕತೆ
ನವದೆಹಲಿ ಫೆಬ್ರವರಿ 24: ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು. ರಷ್ಯಾ ಮತ್ತು ನ್ಯಾಟೋ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂಬ ನಮ್ಮ ನಂಬಿಕೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪಿಎಂ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಮನವಿ ಮಾಡಿದರು. ಸಂವಾದದ ಹಾದಿಗೆ ಮರಳಲು ಕರೆ ನೀಡಿದರು ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ.
Russia-Ukraine War Live Updates : ಯುದ್ಧ ನಿಲ್ಲಿಸುವಂತೆ ಪುಟಿನ್‌ಗೆ ಮನವಿ ಮಾಡಿದ ಪಿಎಂ ಮೋದಿ
ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಭಾರತದ ಕಳವಳಗಳ ಬಗ್ಗೆ ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ಪುಟಿನ್ ಅವರಿಗೆ ತಿಳಿಸಿದರು. ಜೊತೆಗೆ ಅವರ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಜೊತೆಗೆ ತಮ್ಮ ಅಧಿಕಾರಿಗಳು ಮತ್ತು ರಾಜತಾಂತ್ರಿಕ ತಂಡಗಳು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ನಿಯಮಿತ ಸಂಪರ್ಕಗಳನ್ನು ಮುಂದುವರಿಸಲು ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಒಪ್ಪಿಕೊಂಡರು ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ.

ಇಂದು ಬೆಳಗ್ಗೆ ಉಕ್ರೇನ್ ವಿರುದ್ಧ ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳು ಪ್ರಾರಂಭವಾಗಿ ಅಪಾರ ಸಾವು ನೋವು ಸಂಭವಿಸಿದೆ. ಹಲವಾರು ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪುಟಿನ್ ಅವರೊಂದಿಗೆ ಮಾತನಾಡಲಿದ್ದಾರೆನ್ನಲಾಗುತ್ತಿದೆ. NATOದೊಂದಿಗೆ ಉಕ್ರೇನ್‌ನ ಸಾಮೀಪ್ಯದಿಂದಾಗಿ ತಿಂಗಳುಗಳ ಕಾಲ ಉದ್ವಿಗ್ನತೆಯ ನಂತರ ರಷ್ಯಾ ಇಂದು ಬೆಳಿಗ್ಗೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಸಂಜೆಯ ಹೊತ್ತಿ ಗೆಉಕ್ರೇನ್‌ನಲ್ಲಿ 11 ಏರ್‌ಫೀಲ್ಡ್‌ಗಳು ಸೇರಿದಂತೆ 70 ಕ್ಕೂ ಹೆಚ್ಚು ಮಿಲಿಟರಿ ನೆಲೆಗಳನ್ನು ನಾಶಪಡಿಸಿದೆ ಎಂದು ರಷ್ಯಾ ಹೇಳಿದೆ.
ಈ ದಾಳಿಯಿಂದಾಗಿ ಇಂದು ಮುಂಜಾನೆ ಉಕ್ರೇನ್ ರಾಯಭಾರಿ ಇಗೊರ್ ಪೊಲಿಖಾ ಅವರು ಭಾರತದ ಹಸ್ತಕ್ಷೇಪವನ್ನು ಕೋರಿದರು. ಪ್ರಧಾನಿ ನರೇಂದ್ರ ಮೋದಿ ಅವರು, "ಅತ್ಯಂತ ಶಕ್ತಿಯುತ, ಗೌರವಾನ್ವಿತ ವಿಶ್ವ ನಾಯಕರಲ್ಲಿ ಒಬ್ಬರು" ಮತ್ತು "ಮೋದಿ-ಜಿ ಅವರ ಹೇಳಿಕೆ, ಮೋದಿ ಜಿ ಅವರ ಬಲವಾದ ಮಾತನ್ನು ಪುಟಿನ್ ಅವರು ಯೋಚಿಸುತ್ತಾರೆ ಎಂದು ನನಗೆ ಭರವಸೆ ಇದೆ" ಎಂದು ಉಕ್ರೇನ್ ರಾಯಭಾರಿ ಹೇಳಿದ್ದರು. ಇದರ ಬೆನ್ನಲ್ಲೆ ಹಾಗೂ ಭಾರತೀಯರ ರಕ್ಷಣೆಗೆ ಸಂಬಂಧಿಸಿದಂತೆ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ.
ಇನ್ನೂ "ಈ ಬೆಳವಣಿಗೆಗಳ ಬಗ್ಗೆ ನಾವು ಕಳವಳವನ್ನು ವ್ಯಕ್ತಪಡಿಸುತ್ತೇವೆ, ಇದನ್ನು ಎಚ್ಚರಿಕೆಯಿಂದ ನಿರ್ವಹಿಸದಿದ್ದರೆ, ಪ್ರದೇಶದ ಶಾಂತಿ ಮತ್ತು ಭದ್ರತೆಯನ್ನು ದುರ್ಬಲಗೊಳಿಸಬಹುದು" ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಹೇಳಿದ್ದಾರೆ.
ಇಂದು ಸಂಜೆ, ಬಿಕ್ಕಟ್ಟಿನ ಆರ್ಥಿಕ ಪರಿಣಾಮ ಮತ್ತು ಸ್ಪಿನ್-ಆಫ್ ಏರುತ್ತಿರುವ ಕಚ್ಚಾ ತೈಲ ಬೆಲೆಗಳನ್ನು ತಗ್ಗಿಸುವ ಮಾರ್ಗಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ತಮ್ಮ ಅಧಿಕೃತ ನಿವಾಸದಲ್ಲಿ ತಮ್ಮ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.












Click it and Unblock the Notifications