ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಷ್ಯಾದಿಂದ ಕ್ಷಿಪಣಿ ನಿರೋಧಕ ವ್ಯವಸ್ಥೆ ಖರೀದಿ: ಪುಟಿನ್ ಜತೆ ಮೋದಿ ಚರ್ಚೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 4: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅ.04ರಂದು ಭಾರತಕ್ಕೆ ಆಗಮಿಸುತ್ತಿದ್ದು ವಿವಿಧ ವಿಚಾರಗಳ ಕುರಿತು ಪ್ರಧಾನಿ ಮೋದಿಯೊಂದಿಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.

19ನೇ ಇಂಡೋ-ರಷ್ಯನ್ ಶೃಂಗಸಭೆ ಹಿನ್ನಲೆಯಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ. ಕಳೆದ ಬಾರಿಯ ಶೃಂಗಸಭೆ 2017ರಲ್ಲಿ ಸೆಂಟ್ ಪೀಟರ್ ಬರ್ಗ್ ನಲ್ಲಿ ನಡೆದಿತ್ತು. ಕಳೆದ ಮೇ ತಿಂಗಳಿನಲ್ಲಿ ಮೋದಿ ಹಾಗೂ ಪುಟಿನ್ ಅವರು ಸೋಚಿಯಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು.

ಇಂದು ಭಾರತಕ್ಕೆ ಆಗಮಿಸಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಭಾರತಕ್ಕೆ ಆಗಮಿಸಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಪುಟಿನ್ ಭಾರತಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಅಮೆರಿಕಾದಿಂದ ನಿರ್ಬಂಧ ಹೇರಿಕೆ ಆತಂಕದ ನಡುವಲ್ಲೇ ರಷ್ಯಾದಿಂದ ಆತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ ಎಸ್-400 ಖರೀದಿಗೆ ಸಂಪುಟ ಸಮಿತಿ ಒಪ್ಪಿದೆ ನೀಡಿದೆ. ಸಂಪುಟ ಸಮಿತಿ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಎಸ್-400 ಖರೀದಿ ಮಾಡುವ ಕುರಿತ ಒಪ್ಪಂದಕ್ಕೆ ಸಹಿ ಹಾಕಿದ 24 ತಿಂಗಳ ಬಳಿಕ ಮೊದಲ ಎಸ್-400 ಭಾರತಕ್ಕೆ ಆಗಮಿಸಲಿದೆ. ಇನ್ನುಳಿದ ವಾಯು ರಕ್ಷಣಾ ಕ್ಷಿಪಣಿಗಳು ಮುಂದಿನ 4-5 ವರ್ಷಗಳ ಬಳಿಕ ಭಾರತವನ್ನು ತಲುಪಲಿವೆ ಎಂದು ಹೇಳಲಾಗುತ್ತಿದೆ.

Modi to discuss with Putin about anti skid system deal

400 ಕಿ.ಮೀ. ದೂರದಲ್ಲಿರುವ ಮತ್ತು 30 ಕಿ.ಮೀ ಎತ್ತರದಿಂದ ದಾಳಿಗೆ ಚಿಮ್ಮಿಬರುತ್ತಿರುವ ಶತ್ರುಪಡೆಯ ಬಾಂಬರ್​ಗಳು, ಯುದ್ಧವಿಮಾನ, ಕ್ಷಿಪಣಿ, ಡ್ರೋನ್, ಗೂಢಚರ್ಯು ವಸ್ತುಗಳನ್ನು ಹೊಡೆದುರುಳಿಸಬಲ್ಲ ಶಕ್ತಿ ಎಸ್- 400ಗೆ ಇದೆ. ಜತೆಗೆ ಆಧುನಿಕ ರೆಡಾರ್​ಗಳ ಸಹಾಯದಿಂದ ತನ್ನ ರಕ್ಷಣೆಯನ್ನು ಕೂಡ ಮಾಡಿಕೊಳ್ಳಬಲ್ಲ ವ್ಯವಸ್ಥೆಯನ್ನು ಇದರಲ್ಲಿ ಅಳವಡಿಸಲಾಗಿದೆ.

ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸಬೇಡಿ: ಭಾರತಕ್ಕೆ ಅಮೆರಿಕ ಎಚ್ಚರಿಕೆ ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸಬೇಡಿ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ಸೆ.21 ರಂದು ಹೇಳಿಕೆ ನೀಡಿದ್ದ ಅಮೆರಿಕಾ ಭಾರತ, ರಷ್ಯಾದಿಂದ ಎಸ್‌-400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ ಖರೀದಿಸಲು ಮುಂದಾದರೆ ಅಮೆರಿಕದ ನಿರ್ಬಂಧಗಳಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಹೇಳಿತ್ತು.

English summary
Russian President Vladimir Putin and prime minister Narendra Modi will discuss about S-400 anti skid system deal during his visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X