ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಿಲಾಂಡ್ರಿಂಗ್ ಕೇಸ್: ಸೋನಿಯಾ ಅಳಿಯ ರಾಬರ್ಟ್ ಗೆ ಷರತ್ತುಬದ್ಧ ಜಾಮೀನು

|
Google Oneindia Kannada News

ನವದೆಹಲಿ, ಏಪ್ರಿಲ್ 01: ಮನಿ ಲಾಂಡ್ರಿಂಗ್ ಕೇಸಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಸಿಬಿಐನ ವಿಶೇಷ ನ್ಯಾಯಾಲಯವು ಇಂದು ರಾಬರ್ಟ್ ವಾದ್ರಾ ಹಾಗೂ ಮತ್ತೊಬ್ಬ ಆರೋಪಿ ಮನೋಜ್ ಅರೋರಾ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗೆಲ್ಲ ಹಾಜರಾಗಬೇಕು, ಕೋರ್ಟ್ ಪೂರ್ವನುಮತಿ ಇಲ್ಲದೆ ವಿದೇಶಕ್ಕೆ ತೆರಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ ಮಾಡುವಂತಿಲ್ಲ ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಇಬ್ಬರು ಆರೋಪಿಗಳು 5 ಲಕ್ಷ ರು ಮೌಲ್ಯದ ವಯಕ್ತಿಕ ಬಾಂಡ್ ಸಲ್ಲಿಸಿ ಜಾಮೀನು ಪಡೆಯಲು ಅರ್ಹರಾಗಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವದ್ರಾ ಅವರಿಗೆ ಜಾರಿ ನಿರ್ದೇಶನಾಲಯವು ಬಿಸಿ ಮುಟ್ಟಿಸಿತ್ತು. ಭೂ ಹಗರಣ, ಮನಿ ಲಾಂಡ್ರಿಂಗ್ ಗೆ ಸಂಬಂಧಿಸಿದಂತೆ ಮೊದಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ, ನಂತರ ದೇಶದ ವಿವಿಧೆಡೆ ವಾದ್ರಾ ಅವರ ಆಪ್ತರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ನಿರಂತರವಾಗಿ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದರು. ಜೊತೆಗೆ ಬಂಧನದಿಂದ ತಾತ್ಕಾಲಿಕ ರಿಲೀಫ್ ಪಡೆದಿದ್ದರು.

ಸತ್ಯಕ್ಕೆ ಯಾವಾಗಲೂ ಗೆಲುವು, ರಾಬರ್ಟ್ ವಾದ್ರಾ ಫೇಸ್ಬುಕ್ ಪೋಸ್ಟ್ ಸತ್ಯಕ್ಕೆ ಯಾವಾಗಲೂ ಗೆಲುವು, ರಾಬರ್ಟ್ ವಾದ್ರಾ ಫೇಸ್ಬುಕ್ ಪೋಸ್ಟ್

Money laundering case: Special CBI court grants anticipatory bail plea to Robert Vadra

ಲಂಡನ್‌ ಮೂಲದ ಸಂಸ್ಥೆಗೆ 17.77 ಕೋಟಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ರಾಬರ್ಟ್‌ ವಾದ್ರಾ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಇದೇ ಪ್ರಕರಣದಲ್ಲಿ ವಾದ್ರಾ ಆಪ್ತ ಮನೋಜ್ ಅರೋರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಲಂಡನ್ನಿನಲ್ಲಿ ವಾದ್ರಾ ಹೆಸರಿನಲ್ಲಿ 2 ಮನೆ, 6 ಫ್ಲಾಟ್ ಹಾಗೂ ಇನ್ನಿತರ ಆಸ್ತಿ ಹೊಂದಿದ್ದಾರೆ ಎಂದು ಜಾರಿನಿರ್ದೇಶನಾಲಯ ಮಾಹಿತಿ ಕಲೆ ಹಾಕಿ ತನಿಖೆ ನಡೆಸುತ್ತಿದೆ.

ನನ್ನ ಪತ್ನಿಯನ್ನು ಸುರಕ್ಷಿತವಾಗಿಡಿ: ರಾಬರ್ಟ್ ವಾದ್ರಾ ಭಾವನಾತ್ಮಕ ಬರಹ ನನ್ನ ಪತ್ನಿಯನ್ನು ಸುರಕ್ಷಿತವಾಗಿಡಿ: ರಾಬರ್ಟ್ ವಾದ್ರಾ ಭಾವನಾತ್ಮಕ ಬರಹ

ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ವಾದ್ರಾ, ರಾಜಕೀಯ ಪ್ರವೇಶಕ್ಕೆ ಸಮಯ ಇನ್ನು ಕೂಡಿ ಬಂದಿಲ್ಲ. ನನಗೆ ಯಾವುದೇ ಆತುರವಿಲ್ಲ, ನಾನು ಮೊದಲು ಅರ್ಹತೆ ಪಡೆದುಕೊಳ್ಳಬೇಕಿದೆ ಎಂದು ಹೇಳಿದ್ದರು.

English summary
Special CBI court grants anticipatory bail plea to Robert Vadra in money laundering case. Court also allows anticipatory bail to his close aide Manoj Arora. Robert Vadra and Manoj Arora both were on interim bail currently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X