ಸೆಪ್ಟೆಂಬರ್ 14ರಿಂದ ಸಂಸತ್ ಮುಂಗಾರು ಅಧಿವೇಶನ
ನವದೆಹಲಿ, ಆಗಸ್ಟ್ 25: ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.
Recommended Video
ಅಧಿವೇಶನ ಆರಂಭವಾದ ಬಳಿಕ ಮಧ್ಯದಲ್ಲಿ ಯಾವುದೇ ರಜೆ ಇರುವುದಿಲ್ಲ, ಪ್ರತಿನಿತ್ಯ4 ಗಂಟೆಗಳ ಕಾಲ ಅಧಿವೇಶನ ನಡೆಯಲಿದೆ.
ಕೊರೊನಾ ಹಿನ್ನಲೆಯಲ್ಲಿ ಜನರ ಜೀವನ ಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ ಈಗ ಇದೇ ಮೊದಲ ಬಾರಿಗೆ ದೇಶದ ಘನತೆವೆತ್ತ ಸಂಸತ್ ಅಧಿವೇಶನವೂ ಭಿನ್ನವಾಗಿ ನಡೆಯಲಿದೆ.
ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಆಸನದ ವ್ಯವಸ್ಥೆಯೂ ಭಿನ್ನವಾಗಿರಲಿದೆ. 542 ಲೋಕಸಭಾ ಸದಸ್ಯರ ಪೈಕಿ ಕೆಲವರಿಗೆ ಲೋಕಸಭೆಯಲ್ಲಿ, ಕೆಲವರಿಗೆ ರಾಜ್ಯಸಭೆಯಲ್ಲಿ ಮತ್ತೆ ಕೆಲವರಿಗೆ ಸೆಂಟ್ರಲ್ ಹಾಲ್ ನಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತದೆ. ಅಗತ್ಯ ಬಿದ್ದರೆ ಲೋಕಸಭೆ ಮತ್ತು ರಾಜ್ಯಸಭೆ ಗ್ಯಾಲರಿಗಳಲ್ಲಿ ಕೂಡ ಆಸನದ ವ್ಯವಸ್ಥೆ ಮಾಡಲಾಗುತ್ತದೆ.
85 ಇಂಚುಗಳ ದೊಡ್ಡ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಸೀಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು, ವಿರೋಧ ಪಕ್ಷ ನಾಯಕರಿಗೆ ಮೀಸಲಿಡಲಾಗಿದೆ. ರಾಜ್ಯಸಭೆಯಲ್ಲಿ 7 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ.ಲೋಕಸಭೆಯಲ್ಲಿ 15 ಪತ್ರಕರ್ತರಿಗೆ ಅವಕಾಶ, ಪಿಟಿಐ, ಯುಎನ್‌ಐ, ದೂದರ್ಶನಕ್ಕೆ ಅನುಮತಿ. ಒಂದು ಕಲಾಪ ಬೆಳಗ್ಗೆ ಹಾಗೂ ಒಂದು ಕಲಾಪ ಸಂಜೆ ನಡೆಯಲಿದೆ.
ಶಿಫ್ಟ್ ನಲ್ಲಿ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ಎರಡು ಆಯ್ಕೆಗಳನ್ನು ಮುಂದಿಡಲಾಗಿತ್ತು. ಅಂತಿಮವಾಗಿ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿಸಿ ಶನಿವಾರ, ಭಾನುವಾರವೂ ಕೂಡ ರಜೆ ಇಲ್ಲದೆ ಅಧಿವೇಶನ ನಡೆಯಲಿದೆ.












Click it and Unblock the Notifications