ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಜುಲೈ 18: 'ಸಂಸತ್ತಿನ ಮುಂಗಾರು ಅಧಿವೇಶನ ಶಾಂತಯುತವಾಗಿ ನಡೆದು, ಫಲಪ್ರದವಾಗಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, 'ಯಾವುದೇ ಪಕ್ಷ, ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಲು ಇಚ್ಛಿಸಿದರೆ ಮಾತನಾಡಬಹುದು. ನಾವು ಎಲ್ಲಾ ಚರ್ಚೆಗೂ ಸಿದ್ಧವಿದ್ದೇವೆ' ಎಂದರು.

ಮುಂಗಾರು ಅಧಿವೇಶನ: ಮಂಡನೆಯಾಗಲಿರುವ ಪ್ರಮುಖ ಮಸೂದೆಗಳು ಮುಂಗಾರು ಅಧಿವೇಶನ: ಮಂಡನೆಯಾಗಲಿರುವ ಪ್ರಮುಖ ಮಸೂದೆಗಳು

'ಮುಂಗಾರು ಅಧಿವೇಶನದಲ್ಲಿ ರಾಷ್ಟ್ರದ ಹಿತಕ್ಕೆ ಸಂಬಂಧಿಸಿದ ಹಲವು ನಿರ್ಣಯಗಳನ್ನು ಕೈಗೊಳ್ಳುತ್ತಿದ್ದೇವೆ. ಎಲ್ಲಾ ಅನುಭವಿ ಸದಸ್ಯರಿಂದ ಉತ್ತಮ ಸಲಹೆ ಮತ್ತು ಚರ್ಚೆಯನ್ನು ನಾವು ನಿರೀಕ್ಷಿಸುತ್ತೇವೆ' ಎಂದು ಸಹ ಅವರು ಹೇಳಿದರು.

Monsoon Session: PM Mmodi hopes peacefull and fruitful session

ಇದೇ ವೇಳೆ ವೈಎಸ್ ಆರ್ ಕಾಂಗ್ರೆಸ್ಸಿನ ಸಂಸದರು, 'ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೋರಿ' ಸಂಸತ್ತಿನ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಇಂದಿನಿಂದ(ಜು.18) ಆರಂಭವಾಗಿರುವ ಸಂಸತ್ತಿನ ಮುಂಗಾರು ಅಧಿವೇಶನ ಆಗಸ್ಟ್ 10 ರವರೆಗೆ ನಡೆಯಲಿದೆ. ಈ 18 ದಿನಗಳ ಅವಧಿಯಲ್ಲಿ 40 ಕ್ಕೂ ಹೆಚ್ಚು ಮಹತ್ವದ ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.

English summary
Monsoon session 2018: Prime minister Narendra Modi tells, Parliament function smoothy, whatever issues any party has, it can raise on the floor of the house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X