ಅವಿಶ್ವಾಸ ನಿರ್ಣಯದ ಬಗ್ಗೆ ಪ್ರಧಾನಿ ಮೋದಿ ವಿಶ್ವಾಸದ ಟ್ವೀಟ್
ನವದೆಹಲಿ, ಜುಲೈ 20: ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶದಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
"ನಮ್ಮ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಮಹತ್ವದ ದಿನ. ನನ್ನ ಸಹೋದ್ಯೋಗಿಗಳು ರಚನಾತ್ಮಕ, ಸಮಗ್ರ ಚರ್ಚೆ ನಡೆಸುತ್ತಾರೆ ಎಂಬ ನಂಬಿಕೆ ನನಗಿದೆ. ಯಾವುದೇ ಅಡ್ಡಿಯಿಲ್ಲದೆ ಈ ಚರ್ಚೆ ಸಾಗಲಿ. ಇದು ನಮ್ಮ ಜನರಿಗೆ ಮತ್ತು ಈ ಸಂವಿಧಾನದ ರಚನಕಾರರಿಗೆ ನಾವು ನೀಡುವ ಆಣೆಯಾಗಿರಲಿ. ಭಾರತ ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಅಧಿವೇಶನ ಶಾಂತ ರೀತಿಯಲ್ಲಿ ಸಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
Today is an important day in our Parliamentary democracy. I am sure my fellow MP colleagues will rise to the occasion and ensure a constructive, comprehensive & disruption free debate. We owe this to the people & the makers of our Constitution. India will be watching us closely.
— Narendra Modi (@narendramodi) July 20, 2018
ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಲಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿದಂತೆ ಇಂದು(ಜು.20) ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಬಹುಮತ ಸಾಬೀತು ಪಡಿಸಲು ಸರ್ಕಾರಕ್ಕೆ ಬೇಕಾದ ಮ್ಯಾಜಿಕ್ ಸಂಖ್ಯೆ 268. ಈಗಾಗಲೇ 314 ಸದಸ್ಯ ಬಲ ಹೊಂದಿರುವ ಎನ್ ಡಿಎ ಮೈತ್ರಿಕೂಟಕ್ಕೆ ಸರ್ಕಾರ ಬೀಳುವ ಆತಂಕವೇನಿಲ್ಲ.

ಆದರೆ ಕಳೆದ 15 ವರ್ಷದ ನಂತರ ನಡೆಯುತ್ತಿರುವ ಅವಿಶ್ವಾಸ ಮಂಡನೆ ಪ್ರಕ್ರಿಯೆ ಆಡಳಿತಾರೂಢ ಎನ್ ಡಿಎ ಗೆ ಪ್ರತಿಷ್ಠೆಯ ಪ್ರಶ್ನೆಯೂ ಹೌದು.











Click it and Unblock the Notifications