ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವಿಶ್ವಾಸ ನಿರ್ಣಯದ ಬಗ್ಗೆ ಪ್ರಧಾನಿ ಮೋದಿ ವಿಶ್ವಾಸದ ಟ್ವೀಟ್

|
Google Oneindia Kannada News

ನವದೆಹಲಿ, ಜುಲೈ 20: ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶದಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

LIVE: ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಎನ್ಡಿಎ ಸಜ್ಜು LIVE: ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಎನ್ಡಿಎ ಸಜ್ಜು

"ನಮ್ಮ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಮಹತ್ವದ ದಿನ. ನನ್ನ ಸಹೋದ್ಯೋಗಿಗಳು ರಚನಾತ್ಮಕ, ಸಮಗ್ರ ಚರ್ಚೆ ನಡೆಸುತ್ತಾರೆ ಎಂಬ ನಂಬಿಕೆ ನನಗಿದೆ. ಯಾವುದೇ ಅಡ್ಡಿಯಿಲ್ಲದೆ ಈ ಚರ್ಚೆ ಸಾಗಲಿ. ಇದು ನಮ್ಮ ಜನರಿಗೆ ಮತ್ತು ಈ ಸಂವಿಧಾನದ ರಚನಕಾರರಿಗೆ ನಾವು ನೀಡುವ ಆಣೆಯಾಗಿರಲಿ. ಭಾರತ ನಮ್ಮನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಅಧಿವೇಶನ ಶಾಂತ ರೀತಿಯಲ್ಲಿ ಸಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಲಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿದಂತೆ ಇಂದು(ಜು.20) ಮುಂಗಾರು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಬಹುಮತ ಸಾಬೀತು ಪಡಿಸಲು ಸರ್ಕಾರಕ್ಕೆ ಬೇಕಾದ ಮ್ಯಾಜಿಕ್ ಸಂಖ್ಯೆ 268. ಈಗಾಗಲೇ 314 ಸದಸ್ಯ ಬಲ ಹೊಂದಿರುವ ಎನ್ ಡಿಎ ಮೈತ್ರಿಕೂಟಕ್ಕೆ ಸರ್ಕಾರ ಬೀಳುವ ಆತಂಕವೇನಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಯಾರು, ಏನಂದರು?ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಯಾರು, ಏನಂದರು?

Monsoon session: PM Modi tweet on no confidence motion

ಆದರೆ ಕಳೆದ 15 ವರ್ಷದ ನಂತರ ನಡೆಯುತ್ತಿರುವ ಅವಿಶ್ವಾಸ ಮಂಡನೆ ಪ್ರಕ್ರಿಯೆ ಆಡಳಿತಾರೂಢ ಎನ್ ಡಿಎ ಗೆ ಪ್ರತಿಷ್ಠೆಯ ಪ್ರಶ್ನೆಯೂ ಹೌದು.

English summary
Monsoon Session: PM Narendra Modi tweets on No confidence motion in parliament today. Today is an important day in our Parliamentary democracy. I am sure my fellow MP colleagues will rise to the occasion and ensure a constructive, comprehensive and disruption free debate. We owe this to the people and the makers of our Constitution. India will be watching us closely, Modi said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X