ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2 ದಿನಗಳಲ್ಲಿ ದೆಹಲಿಗೆ ಮಾನ್ಸೂನ್: ಈ 5 ರಾಜ್ಯಗಳಲ್ಲಿ ಮಳೆ

|
Google Oneindia Kannada News

ಹೊಸದಿಲ್ಲಿ ಜೂನ್ 25: ನೈರುತ್ಯ ಮುಂಗಾರು ಜೂನ್ 27ರ ಸೋಮವಾರದ ವೇಳೆಗೆ ದೆಹಲಿಗೆ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯು ಜೂನ್‌ನಲ್ಲಿ ತೀವ್ರ ಶಾಖದ ಅಲೆಯನ್ನು ಎದುರಿಸಿದೆ. ಸದ್ಯ ಮುಂಗಾರು ಮುನ್ಸೂಚನೆ ದೆಹಲಿಯ ಜನರಿಗೆ ತಂಪೆರೆಯಲಿದೆ ಎಂದು IMD ಹೇಳಿದೆ. ಇದರೊಂದಿಗೆ ದೆಹಲಿಯಲ್ಲಿ ಶನಿವಾರವೂ ತಾಪಮಾನ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ಕೇರಳ, ಕರ್ನಾಟಕದಂತಹ ರಾಜ್ಯಗಳಲ್ಲಿ ಮಳೆ ಸಾಧ್ಯತೆ ಇದೆ. ಆದರೆ, ಈಗಾಗಲೇ ಕೇರಳ, ಕರ್ನಾಟಕದಂತಹ ದಕ್ಷಿಣ ಭಾರತದ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ದೆಹಲಿಯಲ್ಲಿ ಇಂದು ತಾಪಮಾನದಲ್ಲಿ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ವಾಯುವ್ಯ ಭಾರತದಲ್ಲಿ ಶಾಖ ಹೆಚ್ಚಿದೆ.

ಉತ್ತರ ಕನ್ನಡದಲ್ಲಿ ಮುಂಗಾರು ಚುರುಕು, ರೈತರಿಗೆ ಗೊಬ್ಬರದ ಸಮಸ್ಯೆ ಉತ್ತರ ಕನ್ನಡದಲ್ಲಿ ಮುಂಗಾರು ಚುರುಕು, ರೈತರಿಗೆ ಗೊಬ್ಬರದ ಸಮಸ್ಯೆ

ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ, ನಂತರ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ.

Monsoon to Delhi in 2 days: Rain in these 5 states

ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ನೋಡುವುದಾದರೆ, ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ವಿದರ್ಭ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್-ಬಿಹಾರದಲ್ಲೂ ಮಳೆಯಾಗಲಿದೆ.

Monsoon to Delhi in 2 days: Rain in these 5 states

ಈಶಾನ್ಯ ಭಾರತದ ಉಳಿದ ಭಾಗಗಳು, ಗಂಗಾನದಿ ಪಶ್ಚಿಮ ಬಂಗಾಳ, ಒಳಭಾಗ ಒಡಿಶಾ, ಕೇರಳ, ಲಕ್ಷದ್ವೀಪ, ಜಾರ್ಖಂಡ್‌ನ ಕೆಲವು ಭಾಗಗಳು, ಪೂರ್ವ ಬಿಹಾರ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮಧ್ಯಪ್ರದೇಶ ಮತ್ತು ಉತ್ತರ ಛತ್ತೀಸ್‌ಗಢದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯದ ಬೆಟ್ಟಗಳು ಸೇರಿದಂತೆ ವಾಯುವ್ಯ ಭಾರತದ ಹವಾಮಾನವು ಶುಷ್ಕವಾಗಿರುತ್ತದೆ. ವಾಯುವ್ಯ ಭಾರತ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

English summary
Southwest monsoon is expected to reach Delhi by Monday, June 27, the Indian Meteorological Department (IMD) said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X