ನವದೆಹಲಿ: ಒಂದೇ ವಾರದಲ್ಲಿ 400ಕ್ಕೂ ಹೆಚ್ಚು ಮಂದಿ ಕೊವಿಡ್-19ಗೆ ಬಲಿ!
ನವದೆಹಲಿ, ನವೆಂಬರ್.09: ಕೊರೊನಾವೈರಸ್ ಸೋಂಕಿನ ಮೂರನೇ ಅಲೆಗೆ ರಾಷ್ಟ್ರ ರಾಜಧಾನಿ ನವದೆಹಲಿ ತತ್ತರಿಸಿದೆ. ನವೆಂಬರ್ ತಿಂಗಳಿನಲ್ಲಿ ಕೊವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.
Recommended Video
ನವದೆಹಲಿಯಲ್ಲಿ ಕೊವಿಡ್-19 ಸೋಂಕಿನಿಂದ ಒಂದೇ ವಾರದಲ್ಲಿ 400ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ನವೆಂಬರ್ ತಿಂಗಳ 11 ದಿನಗಳಲ್ಲೇ 46000ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ.
ಕಳೆದ ಅಕ್ಟೋಬರ್.01 ರಿಂದ 31ರವರೆಗೂ ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನಿಂದ 1124 ಮಂದಿ ಮೃತಪಟ್ಟಿದ್ದರು. ಆದರೆ ನವೆಂಬರ್.01 ರಿಂದ 07 ದಿನಾಂಕದವರೆಗೂ 427 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ಜೂನ್ ನಲ್ಲಿ ಅತಿಹೆಚ್ಚು ಸಾವಿನ ಪ್ರಕರಣ:
ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನಿಂದ ಜೂನ್ ನಲ್ಲಿ ಅತಿಹೆಚ್ಚು ಜನರು ಪ್ರಾಣ ಬಿಟ್ಟಿದ್ದರು. ಒಂದೇ ತಿಂಗಳಿನಲ್ಲಿ 2247 ಜನರು ಮಹಾಮಾರಿಗೆ ಬಲಿಯಾಗಿದ್ದರು. ಸಪ್ಟೆಂಬರ್ ನಲ್ಲಿ ಮಹಾಮಾರಿಗೆ 917 ಜನರು ಪ್ರಾಣ ಬಿಟ್ಟಿದ್ದರೆ, ಆಗಸ್ಟ್ ನಲ್ಲಿ ಸಾವಿನ ಸಂಖ್ಯೆ ಕೇವಲ 458ಕ್ಕೆ ಸೀಮಿತವಾಗಿತ್ತು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನವದೆಹಲಿಯಲ್ಲಿ ಕೊವಿಡ್-19 ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಸಾವಿನ ಪ್ರಮಾಣವು ಶೇ.1.59ರಷ್ಟಿದೆ.
ರಾಜ್ಯದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 4,38,529ಕ್ಕೆ ಏರಿಕೆಯಾಗಿದ್ದರೆ, ಈ ಪೈಕಿ 3,89,683 ಸೋಂಕಿತರು ಗುಣಮುಖರಾಗಿದ್ದಾರೆ. 41857 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ಈವರೆಗೂ 6989 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.












Click it and Unblock the Notifications